ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಯುಎಇಗೆ ಸ್ಥಳಾಂತರ

ನವದೆಹಲಿ, ಜು.28- ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವಕಪ್ ಪಂದ್ಯಾವಳಿ ಯುಎಇಯಲ್ಲಿ ನಡೆಯಲಿದೆ. ಆಗಸ್ಟ್ 27ರಿಂದ ಪಂದ್ಯಗಳು ಆರಂಭವಾಗಲಿವೆ. 16 ದಿನಗಳ ಏಷ್ಯಾ ಕಪ್ ನಡೆಯಲಿದೆ.
ಆರ್ಥಿಕ ಬಿಕ್ಕಟ್ಟಿನಿಂದ ಪರಿಸ್ಥಿತಿ ಅಯೋಮಯವಾಗಿದೆ. ಹೀಗಾಗಿ ಏಷ್ಯಾ ಕಪ್ ಪಂದ್ಯಾವಳ ನಡೆಸುವುದು ಅಸಾಧ್ಯವೆನಿಸಿದೆ. ಈ ಪಂದ್ಯಾವಳಿಯನ್ನು‌ ಶ್ರೀಲಂಕಾ ಬದಲಿಗೆ ಯುಎಇ ಯಲ್ಲಿ ಆಯೋಜಿಸಲಾಗುತ್ತದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಏಷ್ಯಾಕಪ್‌ನಲ್ಲಿ ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಸೇರಿದಂತೆ ಒಟ್ಟು 6 ತಂಡಗಳು ಭಾಗವಹಿಸಲಿವೆ. ಒಂದು ತಂಡ ಅರ್ಹತಾ ತಂಡವಾಗಿರುತ್ತದೆ.
ಆಗಸ್ಟ್ 20ರಿಂದ ಅರ್ಹತಾ ಟೂರ್ನಿ ಆರಂಭವಾಗಲಿದ್ದು, ಹಾಂಕಾಂಗ್, ಕುವೈತ್, ಸಿಂಗಾಪುರ, ಯುಎಇ ತಂಡಗಳು ಇದರಲ್ಲಿ ಭಾಗವಹಿಸಲಿವೆ. ಇತ್ತೀಚೆಗಷ್ಟೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಏಷ್ಯಾ ಕಪ್ ಯುಎಇಯಲ್ಲಿ ನಡೆಯಲಿದೆ ಎಂದು ಹೇಳಿದ್ದರು.
ಶ್ರೀಲಂಕಾದ ಮಂಡಳಿಯು ಇತ್ತೀಚೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ಏಷ್ಯಾಕಪ್ ಅನ್ನು ಆಯೋಜಿಸುವ ಸ್ಥಿತಿಯಲ್ಲಿಲ್ಲ ಎಂದು ತಿಳಿಸಿತ್ತು.