ರಾಯಚೂರು, ಏ.೧೧- ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಏ.೧೩ ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಹಾಯ ಆಯುಕ್ತ ರಜಿನಿಕಾಂತ್ ಚವಾಣ್ ಹೇಳಿದರು.
ಅವರಿಂದು ನಗರದ ತಹಸೀಲ್ದಾರ್ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಜೊತೆ ನಾಮಪತ್ರ ಸಲ್ಲಿಕೆ ಕುರಿತು ಮಾತನಾಡಿದರು.
ಚುನಾವಣೆ ದಿನಾಂಕ ಘೋಷಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು ಏ.೧೩ ರಿಂದ ನಾಮಪತ್ರ ಸಲ್ಲಿಕೆ ಪಕ್ರಿಯೆ ಆರಂಭ ಏಪ್ರಿಲ್ ೨೦ ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನ.
ಏಪ್ರಿಲ್ ೨೧ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ ೨೪ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನ. ಮೇ.೧೦ ರಂದು ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪಕ್ಷದ ಅಭ್ಯರ್ಥಿಗಳಿಗೆ ನಾಮಪತ್ರ ಭರ್ತಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಚುನಾವಣಾಧಿಕಾರಿ ಅವರಿಗೆ ಏಪ್ರಿಲ್ ೧೩ರ ಬೆಳಗ್ಗೆ ೧೧ರಿಂದ ಅಪರಾಹ್ನ ೩ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿರುತ್ತದೆ. ಚುನಾವಣೆ ಅಭ್ಯರ್ಥಿಗಳು ಬಿ ಫಾರಂ ಮೂಲಕ ನಾಮಪತ್ರ ಸಲ್ಲಿಸಬೇಕು ಎಂದರು. ಚುನಾವಣೆ ಆದಿಸೂಚನೆ ಪ್ರಕಾರ ಚುನಾವಣೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕು ಎಂದರು.ನಾಮಪತ್ರ ಸಲ್ಲಿಸುವ ಎಸ್ಸಿ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ನ್ಯಾಷನಲ್ ಬ್ಯಾಂಕ್ ಖಾತೆ ಹೊಂದಿರಬೇಕು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಪಕ್ಷದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು