ಏ.೧೪ ಅಂಬೇಡ್ಕರ್ ಜಯಂತಿ ಆಚರಣೆ

ಕೋಲಾರ,ಏ,೧೧:ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾಡಳಿತ ಅನುಮತಿ ಪಡೆದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ೧೩೨ ನೇ ಜಯಂತಿ ನಗರದಲ್ಲಿ ಏ.೧೪ರಂದು ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ದಲಿತ ಸಂಘಟನೆಗಳ ಸಂಯುಕ್ತ ರಂಗದ ಅಧ್ಯಕ್ಷ ಎಂ.ಚಂದ್ರಶೇಖರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಏ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಸಂಘಟನೆಗಳ ಮುಖಂಡರಿಂದ ಮಾಲಾರ್ಪಣೆ ಮಾಡಿದ ನಂತರ ಪಲ್ಲಕ್ಕಿಗಳಿಗೆ ಚಾಲನೆ ನೀಡಲಾಗುವುದು ಎಂದು
ಮೆರವಣಿಗೆಯಲ್ಲಿ ಕಲಾ ತಂಡಗಳು ಮತ್ತು ವಾದ್ಯಗೋಷ್ಟಿಗಳೊಂದಿಗೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟು ಡೂಂ ಲೈಟ್ ವೃತ್ತ, ಕ್ಲಾಕ್ ಟವರ್ ವೃತ್ತ, ಹೊಸ ಬಸ್ ಸ್ಟ್ಯಾಂಡ್ ವೃತ್ತ, ಮೆಕ್ಕೆ ವೃತ್ತದ ಮುಖಾಂತರ ರಂಗಮಂದಿರಕ್ಕೆ ಆಗಮಿಸಲಿದೆ ಎಂದರು.
ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಅಂಬೇಡ್ಕರ್ ಭಾವಚಿತ್ರವುಳ್ಳ ಸುಮಾರು ೫೦ ರಿಂದ ೬೦ ಪಲ್ಲಕ್ಕಿಗಳೊಂದಿಗೆ ಕಲಾತಂಡಗಳು ಸೇರಿದಂತೆ ಮೆರವಣಿಗೆಯಲ್ಲಿ ಸುಮಾರು ೨ ರಿಂದ ೩ ಸಾವಿರ ಜನರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ,ನಂತರದಲ್ಲಿ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಖಂಡ ನಾರಾಯಣಸ್ವಾಮಿದಲಿತ ಸಂಘಟನೆಗಳ ಸಂಯುಕ್ತ ರಂಗದ ಮುಖಂಡ ಡಿಪಿಎಸ್ ಮುನಿರಾಜು, ಮೇಡಿಹಾಳ ಮುನಿಅಂಜನಪ್ಪ, ಹೊನ್ನೇನಹಳ್ಳಿ ಯಲ್ಲಪ್ಪ, ಪ್ರಜಾ ವಿಮೋಚನ ಚಳುವಳಿಯ ಪಿ.ವಿ.ಸಿ ಕೃಷ್ಣಪ್ಪ, ಕಲಾವಿದ ಮತ್ತಿಕುಂಟೆ ಕೃಷ್ಣ, ಖಾದ್ರಿಪುರ ಬಾಬು, ವಕೀಲ ನಾರಾಯಣಸ್ವಾಮಿ ಇದ್ದರು.