ಏ.೨೦ರವಗೆ ಎನ್‌ಆರ್‌ಬಿಸಿ ನೀರು ಹರಿಸಲು ಗಾಣದಾಳ ಆಗ್ರಹ

ಲಿಂಗಸುಗೂರು.ಮಾ.೩೦-ಎಪ್ರಿಲ್ ೨೦ರವಗೆ ರೈತರು ಬೆಳೆದ ಬೆಳೆಗಳಿಗೆ ಬಲದಂಡೆ ಕಾಲುವೆ ಮೂಲಕ ನೀರು ಹರಿಸಲು
ಕರುನಾಡು ವಿಜಯ ಸೇನೆ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕದ ಉಸ್ತುವಾರಿ ಶಿವಪುತ್ರ ಗಾಣದಾಳ ಇವರು ಆಗ್ರಹಿಸಿದ್ದಾರೆ.
ಇಲ್ಲದಿದ್ದರೆ ನಮ್ಮ ಸಂಘಟನೆಯ ಮೂಲಕ ಜಿಲ್ಲೆಯಾದ್ಯಂತ ಹೊರಾಟ ಮಾಡಲಾಗುತ್ತದೆ ಎಂದು ನಿರಾವರಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ನಿರಾವರಿ ಇಲಾಖೆಯ ಅಧಿಕಾರಿಗಳು ರೈತರು ಬೆಳೆದ ಬೆಳೆಗಳಿಗೆ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಮಿನಿಗೆ ಹರಿಸಬೇಕು. ಎಂದು ನಮ್ಮ ಸಂಘಟನೆಯ ಒತ್ತಾಯವಾಗಿದೆ
ನಾರಾಯಣಪುರ ಬಲದಂಡೆ ಕಾಲುವೆಯ ವ್ಯಾಪ್ತಿಯಲ್ಲಿ ಬರುವ ರೈತರು ಬೆಳೆದ ವಿವಿಧ ಬೆಳೆಗಳ ಮೇಲೆ ನಿರಂತರವಾಗಿ ನೀರು ಬಿಡದಿದ್ದರೆ
ರೈತರು ಬೆಳೆದ ಬೆಳೆಗಳಿಗೆ ಕರಿಮೋಡ ಬಿದಂತ್ತಾಗುತ್ತದೆ ರಾಜ್ಯ ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ರಾಜಕೀಯ ಮಾಡದೇ ರೈತರಿಗೆ ಕೃಷಿ ಕೂಲಿಕಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಸ್ಟಾಕ ಸ್ಟೋರೇಜ್ ಇರುವ ನೀರನ್ನು ಕಾಲುವೆ ವ್ಯಾಪ್ತಿಯಲ್ಲಿ ಬರುವ ಜಮಿನುಗಳಿಗೆ ನಿರು ಹರಿಸಲು ಮುಖ್ಯಮಂತ್ರಿ ಯಡಿಯೂರಪ್ಪರವರು ಹಾಗೂ ನಿರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ರೈತರ ಜೊತೆಗೆ ಸೇರಿ ನಮ್ಮ ಸಂಘಟನೆಯ ಮೂಲಕ ಜಿಲ್ಲೆಯಾದ್ಯಂತ ಹೊರಾಟ ಮಾಡಲಾಗುತ್ತದೆ ಎಂದು ಈ ಮುಲಕ ಪತ್ರಿಕೆಗೆ ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ರೈತರು ಬೆಳೆದ ಬೆಳೆಗಳಿಗೆ ಬಲದಂಡೆ ಕಾಲುವೆಯ ಮೂಲಕ ರಾಜಕೀಯ ಮಾಡದೇ ರೈತರಿಗೆ ನಿರು ಹರಿಸಲು ಮುಂದಾಗಬೇಕು ಎಂದು ನಿರಾವರಿ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.