ಏ.೨೭: ಶ್ರೀ ಭಗೀರಥ ಮಹರ್ಷಿ ಜಯಂತಿ

ರಾಯಚೂರು,ಏ.೨೩- ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದಿಂದ ಏಪ್ರಿಲ್ ೨೭ ರಂದು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ನಗರ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೯-೩೦ ಕ್ಕೆ ಆಚರಿಸಲಾಗುತ್ತದೆ ಎಂದು ಜಿಲ್ಲಾ ಉಪ್ಪಾರ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ದೇವೇಂದ್ರಪ್ಪ ಉಪ್ಪಾರ ಹೇಳಿದರು.
ಅವರಿಂದು ನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಪ್ರತಿ ವರ್ಷವೂ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಅತಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಾ ಬಂದಿದ್ದೇವೆ.ಆದರೆ ಈ ವರ್ಷ ವಿಧಾನಸಭಾ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿ ಇರುವುದುದರಿಂದ ಜಯಂತಿಯನ್ನು ಸರಳವಾಗಿ ಜಯಂತಿಯನ್ನು ಆಚರಣೆಯನ್ನು ಮಾಡಲಾಗುತ್ತದೆ ಆದ್ದರಿಂದ ಸಮಾಜದ ಮುಖಂಡರು ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪಾಗುಂಟಪ್ಪ ಮಿರ್ಜಾಪೂರು, ಪ್ರದಾನ ಕಾರ್ಯದರ್ಶಿ ಎಂ.ಚಂದ್ರಶೇಖರ,ಎಂ.ಚಂದ್ರಮೌಳಿ, ಬಿ.ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.