ಏ. ೨೮ ಆಸ್ಕರ್ ಪ್ರಶಸ್ತಿ ಪ್ರದಾನ

ಲಾಸ್ ಏಂಜಲೀಸ್, ಏ.೧೮- ಜಾಗತಿಕ ಸಿನಿಮಾರಂಗದ ಪ್ರತಿಷ್ಠಿತ ಪ್ರಶಸ್ತಿಯಾದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಏಪ್ರಿಲ್ ೨೫ರಂದು ನಡೆಯಲಿದ್ದು ಈ ಬಾರಿ ” ಚಲನಚಿತ್ರದ ನೋಟ ಮತ್ತು ಭಾವನೆ ಧ್ಯೇಯ ಹೊಂದಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಜೊತೆಗೆ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಹೆಚ್ಚು ಸಮಯ ಮಾತನಾಡಲು ಅವಕಾಶ ಮಾಡಿಕೊಡಲು ಆಸ್ಕರ್ ಪ್ರಶಸ್ತಿ ಸಂಘಟಕರು ನಿರ್ಧರಿಸಿದ್ದಾರೆ.
ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ತಾರೆಯರು ಮತ್ತು ಚಿತ್ರರಂಗದ ಪ್ರಮುಖರನ್ನು ಪಟ್ಟಿ ಮಾಡಲಾಗಿದೆ. ಅವರ ಎದುರು ವಿಶ್ವದ ಅತ್ಯಂತ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಕಳೆದ ಎಲ್ಲ ಭಾರಿಗಿಂತ ತೀರ ವಿಭಿನ್ನವಾಗಿದೆ ಎಂದು ನಿರ್ದೇಶಕ ಸ್ಟೀವನ್ ಸೋಡೇರ್ ಬರ್ಗ್ ತಿಳಿದ್ದಾರೆ. ಸ್ಟೇಸೀ ವಿಥ್ ಶೇರ್ ಮತ್ತು ಜೆಸ್ಸಿ ಕೋಲೀನ್ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಂಕಿನ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಮಾರಂಭ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಮುಂಚಿನ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಪ್ರತಿಯೊಬ್ಬ ಪ್ರಶಸ್ತಿ ವಿಜೇತರಿಗೆ ಕೇವಲ ೪೫ ಸೆಕೆಂಡ್‌ಗಳ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಈ ಸಮಯವನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಸ್ಕ್ ಪ್ರದಾನ ಪಾತ್ರ ವಹಿಸಲಿದೆ. ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅವರು ಎಲ್ಲ ನಟ-ನಟಿಯರು ಹಾಗು ಚಿತ್ರರಂಗದ ಗಣ್ಯರಿಗೆ ಸಲಹೆ ನೀಡಿದ್ದಾರೆ.
ಸಮಾರಂಭಕ್ಕೂ ಮುನ್ನ ೯೦ ನಿಮಿಷಗಳ ಪೂರ್ವಭಾವಿ ಕಾರ್ಯಕ್ರಮ ನಡೆಯಲಿದ್ದು ಐದು ಹಾಡುಗಳ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಇರಲಿವೆ
ಲಾಸ್ ಏಂಜಲೀಸ್‌ನ ನ್ಯೂ ಅಕಾಡೆಮಿ ಮ್ಯೂಸಿಯಂ ಮತ್ತು ಐಸ್ ಲ್ಯಾಂಡ್‌ನಲ್ಲಿ ನಡೆಯಲಿದೆ.