ಏ. 1 ರಂದು ವಿಶ್ವ ಕ್ಷಯರೋಗ ದಿನಾಚರಣೆ

ಕಲಬುರಗಿ:ಮಾ.30:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ “ಹೌದು! ನಾವು ಕ್ಷಯರೋಗವನ್ನು ಕೊನೆಗೊಳಿಸೋಣಾ” ಎಂಬ ಘೋಷವಾಕ್ಯದೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಇದೇ ಏಪ್ರಿಲ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಹಳೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಅಂಬಾರಾಯ ರುದ್ರವಾಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ವಿ. ಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಉಪ ನಿರ್ದೇಶಕ ಡಾ. ಶರಣಬಸಪ್ಪಾ U್ಪಣಜಲ್‍ಖೇಡ್ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಕಲಬುರಗಿ ಎಮ್.ಆರ್.ಎಮ್.ಸಿ. ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಎನ್.ಟಿ.ಇ.ಪಿ. ನೋಡಲ್ ಅಧಿಕಾರಿಗಳಾದ ಡಾ. ರವಿಕುಮಾರ್ ಕೂರ್ಲೆ ಅವರು ಅತಿಥಿ ಉಪನ್ಯಾಸಕರಾಗಿ ಪಾಲ್ಗೊಳ್ಳುವರು.