ಏ. 11 ರಂದು ಬಿದನೂರದಲ್ಲಿ ಕೆರೆಗಳ ತುಂಬಿಸುವ ಯೋಜನೆಗೆ ಅಡಿಗಲ್ಲು

ಕಲಬುರಗಿ.ಏ.08:ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಭೀಮಾ ನದಿ ಹತ್ತಿರ ಏತ ನೀರಾವರಿ ನಿರ್ಮಿಸಿ ಬಿದನೂರ, ಗೊಬ್ಬೂರ (ಕೆ) ಮತ್ತು ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಕೆರೆಗಳು ಹಾಗೂ ಮಣ್ಣೂರ ಗ್ರಾಮದ ಭೀಮಾ ನದಿ ಹತ್ತಿರ ಏತ ನೀರಾವರಿ ನಿರ್ಮಿಸಿ ಮಾಶಾಳ ಗ್ರಾಮದ 3 ಕೆರೆಗಳು, ಕರಜಗಿ ಗ್ರಾಮದ 1 ಕೆರೆ (ಒಟ್ಟು 58 ಕೋಟಿ ರೂ.ಗಳ ವೆಚ್ಚದಲ್ಲಿ) ಒಟ್ಟು ಏಳು ಕೆರೆಗಳನ್ನು ತುಂಬಿಸುವ ಯೋಜನೆಯ ಅಡಿಗಲ್ಲು ಸಮಾರಂಭವನ್ನು ರವಿವಾರ ಏಪ್ರಿಲ್ 11 ರಂದು ಬೆಳಿಗ್ಗೆ 11 ಗಂಟೆಗೆ ಅಫಜಲಪುರ ತಾಲೂಕಿನ ಬಿದನೂರ ಗ್ರಾಮದ ಶ್ರೀ ಮಡಿವಾಳೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರ ಘನ ಉಪಸ್ಥಿತಿಯಲ್ಲಿ ಅಫಜಲಪುರ ಶಾಸಕ ಎಮ್.ವಾಯ್. ಪಾಟೀಲ ಅವರು ಸಮಾರಂಭವನ್ನು ಉದ್ಘಾಟಿಸುವರು.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ದಕ್ಷಿಣ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ ಪಾಟೀಲ ರೇವೂರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಸುನೀಲ್ ವಲ್ಲ್ಯಾಪುರೆ, ಡಾ. ಸಾಯಿಬಣ್ಣ ತಳವಾರ, ಶಶೀಲ ಜಿ, ನಮೋಶಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಅಫಜಲಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮೀಣಿ ಬಿ. ಹೊನ್ನಕೇರಿ, ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಬಂದರವಾಡ ತಾಲೂಕು ಪಂಚಾಯಿತಿ ಸದಸ್ಯ ಕೃಷ್ಣಾಬಾಯಿ ಶಟ್ಟೇಪ್ಪ ಡೊಂಗರಿ, ಬಿದನೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬವ್ವ ಬಸಯ್ಯ ಹರಳಯ್ಯ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಅತಿಥಿಗಳಾಗಿ ಪಾಲ್ಗೊಳ್ಳುವರು.