ಏ.14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ

ಕಲಬುರಗಿ,ಏ.10: ಇದೇ ಏ.14ರಂದು ಸಂಜೆ 6ಕ್ಕೆ ನಗರದ ಜಗತ್ ವೃತ್ತದ ಅಂಬೇಡ್ಕರ್ ಪುತ್ಥಳಿ ಬಳಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದು ಜಿಲ್ಲಾ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಾ ಹಾಗೂ ಎಸ್.ಎಸ್.ತಾವಡೆ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಏ.14ರಂದು ಮಧ್ಯಾಹ್ನ 3ಕ್ಕೆ ಕೇಂದ್ರ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಹೊರಡಲಿದ್ದು, ಸಂಜೆ 6ಕ್ಕೆ ಮೆರವಣಿಗೆ ಪುತ್ಥಳಿ ಬಳಿ ಸಮಾವೇಶಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸಂಜೆ 6ಕ್ಕೆ ಭಾರಿ ಬಹಿರಂಗ ಸಭೆ ಹಾಗೂ ಬಹುಜನರ ಸ್ವಾಭಿಮಾನದ ಏಕತಾ ದಿನವನ್ನು ಈ ಸಂದರ್ಭದಲ್ಲಿ ಆಚರಿಸಲಾಗುತ್ತಿದ್ದು, ಅಣದೂರ ಬುದ್ಧ ವಿಹಾರದ ಪೂಜೆ ಭಂತೆ ವರಜ್ಯೋತಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಜಯಂತ್ಯುತ್ಸವ ಉದ್ಘಾಟಿಸಲಿದ್ದಾರೆ ಎಂದರು.
ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ರಾಜು ಸಂಕಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೇಯರ್ ವಿಶಾಲ್ ದರ್ಗಿ, ಜಿಲ್ಲಾ ಜಯಂತ್ಯುತ್ಸವ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಡಾ.ವಿಠಲ ದೊಡ್ಡಮನಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ.ಸಾಗರ್, ಖ್ಯಾತ ನಟ ಟೆನಿಸ್ ಕೃಷ್ಣ ಗೌರವ ಉಪಸ್ಥಿತಿ ಸಾಬೀತುಪಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಡಾ.ಉಮೇಶ್ ಜಾಧವ್, ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯ್‍ಸಿಂಗ್, ಶಾಸಕರಾದ ಎಂ.ವೈ.ಪಾಟೀಲ್, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ್, ಬಿ.ಆರ್.ಪಾಟೀಲ್, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ್, ಸಾಬಣ್ಣ ತಳವಾರ್, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್, ಸುಭಾಷ್ ಆರ್.ಗುತ್ತೇದಾರ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇಲ್ಕೂರ್ ಸೇರಿದಂತೆ ಇನ್ನಿತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಮಾಜಿ ಸಚಿವ ರೇವುನಾಯಕ ಬೆಳಮಗಿ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಮುಖ ಭಾಷಣಕಾರರು:
ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಪ್ರಯುಕ್ತ ಏ.14ರಂದು ನಡೆಯಲಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ನಾಗಪುರ ಪಿ.ಆರ್.ಪಿ ರಾಷ್ಟ್ರೀಯ ಅಧ್ಯಕ್ಷ ಪ್ರೊ.ಜೋಗೇಂದ್ರ ಕವಾಡೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕಿರಣ ಗಾಜನೂರ್, ಇಂಡಿಯನ್ ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಡಾ.ಸುಖಜೋತ್ ಸಿಂಗ್ ಪ್ರಮುಖ ಭಾಷಣಕಾರರಾಗಿ ಮಾತನಾಡಲಿದ್ದಾರೆ ಎಂದು ಸಮಿತಿಯ ಗಣ್ಯರು ತಿಳಿಸಿದರು.
ಡಾ.ಅಂಬಾರಾಯ ಅಷ್ಟಗಿ, ದಿಗಂಬರ ಬೆಳಮಗಿ, ಗುಂಡಪ್ಪ, ದೇವೀಂದ್ರ, ಪ್ರಕಾಶ್ ಮೂಲಭಾರತಿ, ರಾಹುಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಜಯಂತ್ಯುತ್ಸವ ಪ್ರಯುಕ್ತ ಹಲವು ಪಂದ್ಯಾವಳಿ
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಪ್ರಯುಕ್ತ ವಿವಿಧ ಪಂದ್ಯಾವಳಿಗಳು ನಡೆಯಲಿವೆ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಾ ತಿಳಿಸಿದರು.
ಏ.10ರಂದು ಸಂಜೆ 6ಕ್ಕೆ ಬುದ್ಧ ವಿಹಾರದ ಲುಂಬಿಣಿ ಮೈದಾನದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಏ.11ರಂದು ಪುರುಷರಿಗಾಗಿ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಅಬಕಾರಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹಡಪದ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಏ.12ರಂದು ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಸಬ್ ಅರ್ಬನ್ ಎಸಿಪಿ ಡಿ.ಜಿ.ರಾಜಣ್ಣ ಉದ್ಘಾಟಿಸಲಿದ್ದಾರೆ.
ಇನ್ನು, ಏ.12ರಂದು ಸಂಜೆ 7ಕ್ಕೆ ಕಲಬುರಗಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.