ಏ. 18 ರಂದು ಜಿಲ್ಲಾ ಸ್ವೀಪ್ ಸಮಿತಿಯಿಂದಕೇಂದ್ರ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ

ಕಲಬುರಗಿ:ಏ.17:ಕಲಬುರಗಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾರರು ಮತದಾನದ ಹಕ್ಕು ಚಲಾಯಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಏಪ್ರಿಲ್ 18 ರಂದು ಗುರುವಾರ ಸಂಜೆ 4.30 ಗಂಟೆಗೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಭಂವರ್ ಸಿಂಗ್ ಮೀನಾ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಸಾರಿಗೆ ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿರುವರು.