ಏ.2ರಂದುಪೊಲೀಸ್ ಧ್ವಜ ದಿನಾಚರಣೆ

ಬಳ್ಳಾರಿ.ಮಾ.30: ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ದ್ವಜಾ ದಿನಾಚರಣೆ ಕಾರ್ಯಕ್ರಮ ಏ.2ರಂದು ಬೆಳಗ್ಗೆ 8ಕ್ಕೆ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯುತು ಮೈದಾನದಲ್ಲಿ ನಡೆಯಲಿದೆ. ನಿವೃತ್ತ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್.ಹೆಚ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಎಂ.ನಂಜುಂಡಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.