
ಹುಮನಾಬಾದ್ :ಎ.25: ವಿಧಾನಸಭೆ ಚುನಾವಣೆ ಪ್ರಛಾರದ ಹಿನ್ನಲೆ ಏ. 29ರಂದು ಹುಮನಾಬಾದ್ ತಾಲೂಕಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನಲೆ ತಾಲೂಕಿನ ಚೀನಕೇರಾ ಕ್ರಾಸ್ ಹತ್ತಿರದಲ್ಲಿ ನಡೆಯುತ್ತಿರುವ ಸಿದ್ಧತೆ ಕಾರ್ಯ ವಿಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶದ ಪ್ರಧಾನಮಂತ್ರಿ ನೇತೃತ್ವದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಬೀದರ ಜಿಲ್ಲೆಯ ಒಟ್ಟು 6 ವಿಧಾನಸಭೆ ಕ್ಷೇತ್ರಗಳು ಸೇರಿದಂತೆ ಕಲಬುರಗಿ ಜಿಲ್ಲೆಯ ಆಳಂದ, ಚಿಂಚೋಳಿ ಹಾಗೂ ಕಲಬುರಗಿ ಗ್ರಾಮೀಣ ಕ್ಷೇತ್ರಗಳ ಒಟ್ಟು 3 ಲಕ್ಷಕ್ಕೂ ಅಧಿಕ ಕಾರ್ಯಕರ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಘಟನಾ ಕಾರ್ಯದರ್ಶಿ ಸುರೇಶ ಬಿರಾದಾರ, ಬಸವರಾಜ ಆರ್ಯ, ಮಲ್ಲಿಕಾರ್ಜುನ್ ಕುಂಬಾರ, ಪುರಸಭೆ ಸದಸ್ಯ ರಮೇಶ ಕಲ್ಲೂರ್, ಶಶಿಧರ ಮಠಪತಿ ಸೇರಿದಂತೆ ಅನೇಕರಿದ್ದರು