ಏ. 29 ರಂದು ಕಲಬುರಗಿ ಜಿಮ್ಸ್ ನ ಮೂರನೇ ಘಟಿಕೋತ್ಸವ

ಕಲಬುರಗಿ,ಏ.26:ಕಲಬುರಗಿಯ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆನಂತವಿಜಯ 3ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಏಪ್ರಿಲ್ 29 ರಂದು ಶನಿವಾರ ಸಂಜೆ 4 ಗಂಟೆಗೆ ಕಲಬುರಗಿ ಜಿಮ್ಸ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷ ಡಾ. ಬಿ.ಎನ್. ಗಂಗಾಧರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಗೌರವ ಅತಿಥಿಗಳಾಗಿ ಹಾಗೂ ಕಲಬುರಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ.ಕವಿತಾ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.