ಯಾದಗಿರಿ: ಏ, 27;ಯಾದಗಿರಿ ನಗರದಲ್ಲಿನ ನಿಗದಿತ ಕೇಂದ್ರಗಳಲ್ಲಿ ಏಪ್ರಿಲ್ 29 ಹಾಗೂ 30 ರಂದು ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ಸಿ ಹುದ್ದೆಗಳ ಕನ್ನಡ ಭಾಷಾ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಯಾವುದೇ ರೀತಿಯ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಪರೀಕ್ಷೆಯನ್ನು ಪಾರದರ್ಶಕತೆಯಿಂದ ಸುಸೂತ್ರವಾಗಿ ನಡೆಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕುರಿತಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹಾಗೂ ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ( ಸಿವಿಲ್) ಮತ್ತು ಕಿರಿಯ ಇಂಜಿನಿಯರ್ ( ಮೆಕಾನಿಕಲ್) ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಸದರಿ ಪರೀಕ್ಷೆಗೆ ನಗರದ ಸರ್ಕಾರಿ ಪದವಿ ಕಾಲೇಜು, ಸರ್ಕಾರಿ ಪಿಯು ಕಾಲೇಜು, ಸರ್ಕಾರಿ ಕನ್ಯಾ ಪ್ರೌಢಶಾಲೆ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸೇರಿದಂತೆ 4ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ.
ಏಪ್ರಿಲ್ 29 ರಂದು ಮೊದಲ ಅಧಿವೇಶನ ಕನ್ನಡ ಭಾಷಾ ಪರೀಕ್ಷೆಯು ಬೆಳಿಗ್ಗೆ 10 ರಿಂದ 12 ಗಂಟೆಯ ವರೆಗೆ ನಡೆಯಲಿದ್ದು, ಇದರಲ್ಲಿ ಇದರಲ್ಲಿ 439 ಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಹಾಗೂ ಏಪ್ರಿಲ್ 30 ರಂದು ಪತ್ರಿಕೆ-1 ಸಾಮಾನ್ಯ ಜ್ಞಾನ ವಿಷಯವು ಬೆಳಿಗ್ಗೆ 10 ಗಂಟೆಯಿಂದ 11:30 ರ ವರೆಗೆ, ಪತ್ರಿಕೆ-2 ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದೆ ಒಟ್ಟು 1252 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೆÇಲೀಸರು ಬಂದೋಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಇಲಾಖಾ ಕ್ರಮದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿ ಪ್ರದೇಶ ಎಂದು ಜಿಲ್ಲಾಧಿಕಾರಿಯವರು ಘೋಷಿಸಿದ್ದಾರೆ. ಮತ್ತು ಸುತ್ತಲಿನ ಝಿರಾಕ್ಸ್, ಕಂಪ್ಯೂಟರ್ ಮುಚ್ಚುವಂತೆ ಆದೇಶಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಸ್ವಚ್ಚತೆ ಕಾಪಾಡಿ ಸ್ಯಾನಿಟೈಜೇಶನ್ ವ್ಯವಸ್ಥೆ ಮಾಡಲು ಕ್ರಮವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಆರೋಗ್ಯ ಸಿಬ್ಬಂದಿಗಳನ್ನು ಆರೋಗ್ಯ ಸಲಕರಣೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ಹಾಜರಾಗಬೇಕು. ಸಮಯ ವಿಳಂಬವಾದರೆ ಅವಕಾಶವಿಲ್ಲ.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಪೆÇೀನ್ ಗಳ ಮತ್ತು ಕೈ ಗಡಿಯಾರಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು. ಕೇಂದ್ರಗಳಲ್ಲಿ ವಾಟರ್ ಬಾಯ್ ಗಳ ನೇಮಕವನ್ನು ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು ಎಂದರು.
ಖಜಾನೆ ಇಲಾಖೆಗೆ ಗೌಪ್ಯ ಸಾಮಾಗ್ರಿಗಳನ್ನು ಇಡಲು ಮತ್ತು ತೆಗೆಯಲು ಭದ್ರತೆಗೆ ಕ್ರಮವಹಿಸಿ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ,ಡಿಡಿಪಿಯು ಮರಿಸ್ವಾಮಿ ಎಂ, ಡಿಡಿಪಿಐ ಶಾಂತಗೌಡ ಪಾಟೀಲ್, ಲೀಡ್ ಕಾಲೇಜ್ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಕೆಪಿಎಸ್ಸಿ ನೋಡಲ್ ಅಧಿಕಾರಿ ಉಮಾಕಾಂತ ಮಲ್ಲಗಿರೆ, ಹಾಗೂ ಪರೀಕ್ಷೆಗೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತದಳ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.