ಏ. 3 ರಂದು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಬೈಕ್ ರ್ಯಾಲಿ

ಕಲಬುರಗಿ,ಏ.01:ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಇದೇ ಏಪ್ರಿಲ್ 3 ರಂದು ಸಂಜೆ 5 ಗಂಟೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತ (ತಿಮ್ಮಾಪುರಿ ವೃತ್ತ)ದಿಂದ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಡಿ. ಬದೋಲೆ ಅವರು ತಿಳಿಸಿದ್ದಾರೆ.
ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತ (ತಿಮ್ಮಾಪುರಿ) ದಿಂದ ಆರಂಭಗೊಳ್ಳುವ ಬೈಕ್ ರ್ಯಾಲಿಯು ಡಾ.ಬಿ.ಆರ್. ಅಂಬೇಡ್ಕರ ವೃತ್ತ ಜಗತ್‍ಗೆ ಬಂದು ಕೊನೆಗೊಳ್ಳಲಿದೆ. ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಈ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.