ಏ. 5ರಂದು ಅದ್ದೂರಿಯಿಂದ ಡಾ. ಬಾಬು ಜಗಜೀವನರಾಮ್ ಜಯಂತ್ಯುತ್ಸವ

ಕಲಬುರಗಿ:ಮಾ.21: ನಗರದಲ್ಲಿ ಬರುವ ಏಪ್ರಿಲ್ 5ರಂದು ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 117ನೇ ಜಯಂತ್ಯುತ್ಸವವನ್ನು ಅದ್ದೂರಿಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಜಯಂತ್ಯುತ್ಸವ ಸಮಿತಿಯ ಕೋರ್ ಕಮೀಟಿ ಅಧ್ಯಕ್ಷ ಪರಮೇಶ್ವರ್ ಖಾನಾಪೂರ್ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದ್ದೂರಿಯಿಂದ ಆಚರಿಸಲು ಜಿಲ್ಲಾ ಜಯಂತ್ಯುತ್ಸವ ಸಮಿತಿ ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಬಸವರಾಜ್ ಬಾಡಿಯಾಳ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಏಪ್ರಿಲ್ 5ರಂದು ಬೆಳಿಗ್ಗೆ 10-45 ಗಂಟೆಗೆ ಬಹಿರಂಗ ಸಭೆ ಜರುಗಲಿದ್ದು, ಸಭೆಯಲ್ಲಿ ರಾಜಕೀಯ ಮುಖಂಡರು, ಬುದ್ದಿಜೀವಿಗಳು, ಮಹಿಳೆಯರು, ಮಕ್ಕಳು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಡಾ. ಬಾಬು ಜಗಜೀವನರಾಮ್ ಅವರ 117ನೇಯ ಜಯಂತ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜರುಗಲಿವೆ. ಈಗಾಗಲೇ ನಗರದ ಸುಮಾರು 25 ತಂಡಗಳಿಂದ ಕ್ರಿಕೆಟ್, ನೃತ್ಯ, ಸಾಂಸ್ಕøತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಅಂದು ಮಧ್ಯಾಹ್ನ 1 ಗಂಟೆಗೆ ಸರದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ. ಬಾಬು ಜಗಜೀವನರಾಮ್ ಪುತ್ಥಳಿಯವರೆಗೂ ಮೆರ್ವಣಿಗೆ ಜರುಗಲಿದೆ ಎಂದು ಅವರು ತಿಳಿಸಿದರು. ದತ್ತು ಭಾಸಗಿ ಅವರು ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧಿಕೃತ ಅಧ್ಯಕ್ಷರಾಗಿದ್ದು, ಸಮಾಜದ ಕೆಲವರು ಸಮಿತಿಗಳನ್ನು ಮಾಡಿಕೊಂಡಿದ್ದಾರೆ, ಅವರೆಲ್ಲರನ್ನೂ ಮುಂಬರುವ ದಿನಗಳಲ್ಲಿ ಸೇರಿಸಿಕೊಂಡು ಜಯಂತ್ಯೋತ್ಸವವನ್ನು ಆಚರಿಸಲಾಗುವುದೆಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶ್ಯಾಮ್ ನಾಟೀಕಾರ್, ನಾಗರಾಜ್ ಗುಂಡಗುರ್ತಿ, ಲಿಂಗರಾಜ್ ತಾರಫೈಲ್, ಸುಶೀಲ್ ಕಾಂಬಳೆ, ದತ್ತು ಭಾಸಗಿ ಮುಂತಾದವರು ಉಪಸ್ಥಿತರಿದ್ದರು.