ಏ. 7 ರಿಂದ 9ರವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಕಲಬುರಗಿ,ಏ.06:ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದÀ ಕಾರ್ಯ ಮತ್ತು ಪಾಲನೆ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಕೆಳಕಂಡ ಉಪವಿಭಾಗಗಳಿಗೆ ಸಂಬಂಧಿಸಿದಂತೆ ಗ್ರಾಹಕರ ಸಂವಾದ ಸಭೆಯು ಇದೇ ಏಪ್ರಿಲ್ 7, 8 ಹಾಗೂ 9 ರಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆಳಂದ ಉಪವಿಭಾಗಕ್ಕೆ ಸಂಬಂಧಿಸಿದಂತೆ ಏಪ್ರಿಲ್ 7 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವೆಗೆ ಆಳಂದ ಜೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಹಾಗೂ ಕಡಗಂಚಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಡಗಂಚಿ ಜೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಜರುಗಲಿದೆ.
ಗ್ರಾಮೀಣ ಉಪವಿಭಾಗಕ್ಕೆ ಸಂಬಂಧಿಸಿದಂತೆ ಏಪ್ರಿಲ್ 8 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೆಸ್ಕಾಂ ಗ್ರಾಮೀಣ ಉಪವಿಭಾಗೀಯ ಕಚೇರಿಯಲ್ಲಿ ಜರುಗಲಿದೆ. ಅಫಜಲಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಏಪ್ರಿಲ್ 9 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಫಜಲಪುರ ಜೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಹಾಗೂ ಚೌಡಾಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಚೌಡಾಪುರ ಜೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆ ಜರುಗಲಿದೆ.
ವಿದ್ಯುತ್ ಗ್ರಾಹಕರು ಖುದ್ದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಂವಾದ ಸಭೆಯಲ್ಲಿ ಭಾಗವಹಿಸಿ ವಿದ್ಯುತ್‍ಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆಗಳಿದ್ದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಈ ಸಂವಾದ ಸಭೆಯಲ್ಲಿ ಭಾಗವಹಿಸುವ ಎಲ್ಲಾ ಗ್ರಾಹಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು. ಸ್ಯಾನಿಟೈಜರ್ ಬಳಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.