ಏ. 9 ರಂದು ಮಾಶಾಳದಲ್ಲಿ ಕೆರೆಗಳ ತುಂಬಿಸುವ ಯೋಜನೆಗೆ ಅಡಿಗಲ್ಲು ಸಮಾರಂಭ

ಕಲಬುರಗಿ.ಏ.08:ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿ ಹತ್ತಿರ ಏತ ನೀರಾವರಿ ನಿರ್ಮಿಸಿ ಮಾಶಾಳ ಗ್ರಾಮದ ಮೂರು ಕೆರೆಗಳು ಹಾಗೂ ಕರಜಗಿ ಗ್ರಾಮದ ಒಂದು ಕರೆ ಮತ್ತು ಬಂದವಾಡ ಗ್ರಾಮದ ಭೀಮಾ ನದಿ ಹತ್ತಿರ ಏತ ನೀರಾವರಿ ನಿರ್ಮಿಸಿ ಬಿದನೂರ, ಗೊಬ್ಬರ (ಕೆ) ಮತ್ತು ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಕೆರೆ (ಒಟ್ಟು 58 ಕೋಟಿ ರೂ.ಗಳ ವೆಚ್ಚದಲ್ಲಿ) ಒಟ್ಟು ಏಳು ಕೆರೆಗಳನ್ನು ತುಂಬಿಸುವ ಯೋಜನೆಯ ಅಡಿಗಲ್ಲು ಸಮಾರಂಭವನ್ನು ಶುಕ್ರವಾರ ಏಪ್ರಿಲ್ 9 ರಂದು ಬೆಳಿಗ್ಗೆ 11 ಗಂಟೆಗೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಚೌಡೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರ ಘನ ಉಪಸ್ಥಿತಿಯಲ್ಲಿ ಅಫಜಲಪುರ ಶಾಸಕ ಎಮ್.ವಾಯ್. ಪಾಟೀಲ ಅವರು ಸಮಾರಂಭವನ್ನು ಉದ್ಘಾಟಿಸುವರು.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಸೋಲಾಪುರ ಶಾಸಕರು ಹಾಗೂ ಮಾಜಿ ಸಚಿವರಾದ ವಿಜಯಕುಮಾರ ದೇಶಮುಖ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ,ಸುನೀಲ್ ವಲ್ಲ್ಯಾಪುರೆ, ಡಾ. ಸಾಯಿಬಣ್ಣ ತಳವಾರ, ಶಶೀಲ ನಮೋಶಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಅಫಜಲಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮೀಣಿ ಬಿ. ಹೊನ್ನಕೇರಿ, ಮಾಶಾಳ ಜಿಲ್ಲಾ ಪಂಚಾಯತ್ ಸದಸ್ಯ ಅರುಣಕುಮಾರ ಎಮ್.ವಾಯ್. ಪಾಟೀಲ, ಕರಜಗಿ ಜಿಲ್ಲಾ ಪಂಚಾಯತ್ ಸದಸ್ಯ ಬೋರಮ್ಮ ಮಹದೇವಪ್ಪ ಕರೂಟಿ, ಅಫಜಲಪುರ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಮಾಶಾಳ ತಾಲೂಕು ಪಂಚಾಯತ್ ಸದಸ್ಯ ರಾಜು ಬಬಲಾದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಗಲಾಬಾಯಿ ದೊಡ್ಡಪ್ಪ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಅತಿಥಿಗಳಾಗಿ ಪಾಲ್ಗೊಳ್ಳುವರು.