ಐಕ್ಯತಾ ಸಮಾವೇಶಕ್ಕೆ ಹರಿದು ಬಂದ ಜನಸಾಗರ

ಚಿತ್ರದುರ್ಗ, ಜ.08: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೇಸ್ ಪಕ್ಷ ಐತಿಹಾಸಿಕ ಕೋಟೆ ನಗರದಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಐಕ್ಯತಾ ಸಮಾವೇಶಕ್ಕೆ ಜನಸಾಗರ ಹರಿದುಬರುತ್ತಿದ್ದು, ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಬೃಹತ್ ಪೇಂಡಾಲ್ ನಲ್ಲಿ ಸಾವಿರಾರು ಕುರ್ಚಿಗಳನ್ನು ಹಾಕಲಾಗಿದ್ದು, ಇದರಲ್ಲಿ ಬಹುತೇಕ ಹಾಸನಗಳು ಪಕ್ಷದ ಕಾರ್ಯಕರ್ತರಿಂದ ತುಂಬಿವೆ.ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ನಡೆಯುತ್ತಿರುವ ಈ ಪರಿಶಿಷ್ಟ ಜಾತಿ ಮತ್ತು ಪಂಗಡದ ಐಕ್ಯತಾ ಸಮಾವೇಶವು ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.ಸಮಾವೇಶವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಿದ್ದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಸೇರಿ ಅನೇಕ ವರಿಷ್ಠರು ಪಾಲ್ಗೊಂಡಿದ್ದಾರೆ. ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಪಕ್ಷದ ಕಾರ್ಯಕರ್ತರು ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಕಾಂಗ್ರೆಸ್ ನ ಮತ ಪೆಟ್ಟಿಗೆಗೆ ಕೈಹಾಕಿರುವ ಭಾರತೀಯ ಜನತಾ ಪಾರ್ಟಿಗೆ ಸಂದೇಶ ರವಾನಿಸುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ಮುಖಂಡರು ಹೇಳುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಮುಂಬಾಗದ ಬಿಡಿ ರಸ್ತೆಯ ತುಂಬಾ ಕಾಂಗ್ರೇಸ್ ಪಕ್ಷದ ಧ್ವಜಗಳು ಹೋರಾಡುತ್ತಿದ್ದು, ಜನರು ಸಾಕಷ್ಟು ವಾಹನಗಳಿಂದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿದ್ದು, ಇವರನ್ನು ಸಂಬಾಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕಾರ್ಯಕರ್ತರಿಗೆ ಬೆಳಗ್ಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ ಮೈಸೂರ್ ಪಾಕು ಸೇರಿದಂತೆ ವಿವಿಧ ಬಗೆಯ ಸಿಹಿ ಊಟದ ವ್ಯವಸ್ಥೆಯನ್ನು ಪಕ್ಷದ ಮುಖಂಡರು ಮಾಡಿಸಿದ್ದಾರೆ.