ಐತಿಹಾಸಿಕ ಲಕ್ಕುಂಡಿ ಉತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ: ಸಚಿವ ಪಾಟೀಲ

ಗದಗ,ಜ10: ಬರುವ ಫೆಬ್ರುವರಿ 11 ಹಾಗೂ 12 ರಂದು ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಲೋಕೊಪಯೋಗಿ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ ತಿಳಿಸಿದರು.

ಲಕ್ಕುಂಡಿಯ ಶ್ರೀ ಅನ್ನದಾನೇಶ್ವರ ಸಮುದಾಯ ಭಾವನದಲ್ಲಿ ಜರುಗಿದ ಲಕ್ಕುಂಡಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಪ್ರವಾಹ ಹಾಗೂ ಕೊರೊನಾ ಕಾರಣಗಳಿಂದಾಗಿ ಲಕ್ಕುಂಡಿ ಉತ್ಸವ ಜರುಗಿಸಲು ಸಾಧ್ಯವಾಗಿರುವುದಿಲ್ಲ. ಈ ಭಾರಿ ಅರ್ಥಪೂರ್ಣವಾಗಿ ಎರಡು ದಿವಸಗಳ ಲಕ್ಕುಂಡಿ ಉತ್ಸವ ಜರುಗಿಸಲು ತೀರ್ಮಾನಿಸಲಾಗಿದ್ದು ಈ ನಿಟ್ಟಿನಲ್ಲಿ ಗ್ರಾಮಸ್ಥರ ಅಭಿಪ್ರಾಯ ಪಡೆದುಕೊಳ್ಳಲು ಈ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಫೆ 11 ಹಾಗೂ 12 ರಂದು ಜರುಗಿಸಲಾಗುವ ಲಕ್ಕುಂಡಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರ್ವಕ್ರಮ ಕೈಗೊಳ್ಳಲಾಗುವದು. ಉತ್ಸವದ ದಿನಗಳಂದು ಆಯೋಜಿಸಲಾಗುವ ಕಾರ್ಯಕ್ರಮಗಳ ಕುರಿತು ಗ್ರಾಮದ ಸಾರ್ವಜನಿಕರ ಅಭಿಪ್ರಾಯ ಪಡೆದ ಸಚಿವರು ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವದು. ದಾನ ಚಿಂತಾಮಣಿ ಅತ್ತಿಮಬ್ಬೆ ಮಹಾದ್ವಾರ ನಿರ್ಮಾಣಕ್ಕೆ ಅಗತ್ಯದ ಕ್ರಮ ವಹಿಸಲಾಗುವದು ಎಂದರು. ಲಕ್ಕುಂಡಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಹದಿನೈದು ದಿನಗಳೊಳಗಾಗಿ ಸರಿಪಡಿಸಲು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ನಿರ್ದೇಶಿಸಿದರು. ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ತಿಳಿಸಿದರು.

ಸದರಿ ಉತ್ಸವದ ಯಶಸ್ವಿಗೆ ಗ್ರಾಮಸ್ಥರ ಸಹಕಾರವು ಅಗತ್ಯವಿದ್ದು ಲಕ್ಕುಂಡಿ ಉತ್ಸವವನ್ನು ಊರ ಹಬ್ಬವನ್ನಾಗಿ ಆಚರಿಸಲು ಗ್ರಾಮಸ್ಥರು ಮುಂದಾಗುವಂತೆ ಕರೇ ನೀಡಿದರು. ಉತ್ಸವದ ಯಶಸ್ವಿಗಾಗಿ ಅಗತ್ಯದ ಸಮಿತಿಗಳನ್ನು ರಚಿಸಿ ಫೆ 11 ಹಾಗೂ 12 ರಂದು ಜರುಗುವ ದಾನಚಿಂತಾಮಣಿ ಅತ್ತಿಮಬ್ಬೆಯ ಕೀರ್ತಿಯನ್ನು ರಾಷ್ಟ್ರಾದ್ಯಂತ ಪಸರಿಸಲು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಸಚಿವ ಸಿ.ಸಿ.ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿದರು.
ಸಭೆಯಲ್ಲಿ ಲಕ್ಕುಂಡಿ ಗ್ರಾಮ ಪಂಚಾಯತ ಅಧ್ಯಕ್ಷೆ ಲಲಿತಾ ಗದಗಿನ, ಉಪಾಧ್ಯಕ್ಷ ಸಿದ್ದು ಮುಳಗುಂದ, ಗ್ರಾಮ ಪಂಚಾಯತ ಸದಸ್ಯರು, ನಗರಾಭೀವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಜಿ.ಪಂ.ಸಿ.ಇ.ಓ ಡಾ.ಸುಶೀಲಾ ಬಿ., ಜಿಲ್ಲಾ ಪೆÇ?ಲಿಸ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಲಕ್ಕುಂಡಿ ಗ್ರಾಮದ ಗಣ್ಯರು ಸಾರ್ವಜನಿಕರು ಹಾಜರಿದ್ದರು.