ಐತಿಹಾಸಿಕ ಸ್ಥಳಗಳ ರಕ್ಷಣೆಯಿಂದ ಪರಂಪರೆಯ ಉಳಿವು

ಕಲಬುರಗಿ:ಎ.18: ನಮ್ಮ ದೇಶ ತನ್ನದೇ ಆದ ಭವ್ಯವಾದ ಇತಿಹಾಸ, ಪರಂಪರೆ ಹೊಂದಿದೆ. ಇದನ್ನು ಈಗಿನ ಯುವ ಪೀಳಿಗೆಗೆ ತಿಳಿಸಿಕೊಟ್ಟು, ಉಳಿಸಿ, ಬೆಳೆಸುವುದು ಅವಶ್ಯಕ. ಈ ನಿಟ್ಟಿನಲ್ಲಿ ದೇಶದಲ್ಲಿರುವ ಐತಿಹಾಸಿಕ ಸ್ಮಾರಕಗಳು, ವಾಸ್ತುಶಿಲ್ಪಗಳ ಪಾರಂಪರಿಕ ಕಟ್ಟಡಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಬೇಕು. ವಿದ್ಯಾರ್ಥಿಗಳು ಇವುಗಳನ್ನು ವೀಕ್ಷಿಸುವದರಿಂದ ನಮ್ಮ ದೇಶದ ಕಲೆ, ಸಾಹಿತ್ಯ, ಸಂಸ್ಕøತಿ, ಪರಂಪರೆ, ಇತಿಹಾಸ ತಿಳಿಯಲು ಮತ್ತು ಪರಂಪರೆ ಉಳಿಯಲು ಸಾಧ್ಯವಾಗುತ್ತದೆಯೆಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಮತಪಟ್ಟರು.
ನಗರದ ಶಹಾಬಜಾರ ನಾಕಾ ಸಮೀಪದಲ್ಲಿರುವ ಐತಿಹಾಸಿಕ, 2000 ವರ್ಷಗಳ ಪುರಾತನ ದೇವಾಲಯವಾದ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಇವುಗಳ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ವಿಶ್ವ ಪರಂಪರೆ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ವಿಶ್ವ ಪರಂಪರೆಯು ಮನುಕುಲದ ಸಂಪತ್ತಾಗಿದೆ. ನಮ್ಮ ದೇಶದ ಶ್ರೀಮಂತ ಸಂಸ್ಕøತಿ, ಪರಂಪರೆಯನ್ನು ಸಂರಕ್ಷಿಸುವ ಜವಬ್ದಾರಿ ಪ್ರತಿಯೊಬ್ಬರ ಮೇಲಿದೆ. ಇದರ ಬಗ್ಗೆ ಎಲ್ಲೆಡೆ ವ್ಯಾಪಕವಾದ ಜಾಗೃತಿಯಾಗಬೇಕು. ಭವ್ಯವಾದ ತಾಣಗಳು, ಸ್ಮಾರಕಗಳು, ಸುಕೇತ್ರಗಳು ಇಂದು ಅವನತಿಯ ಅಂಚಿನಲ್ಲಿವೆ. ಇವುಗಳು ನಾಶವಾದರೆ ಮುಂದಿನ ಪೀಳಿಗೆ ಕೇವಲ ಚಿತ್ರದಲ್ಲಿ ನೋಡಲು ಮಾತ್ರ ಸಾಧ್ಯವಿದೆ. ಆದ್ದರಿಂದ ಇವುಗಳನ್ನು ಸಂರಕ್ಷಿಸುವದರಿಂದ ಇತಿಹಾಸ ಮತ್ತು ಮಾನವನ ಸಂಸ್ಕøತಿ, ಪರಂಪರೆ ಉಳಿಯುತ್ತದೆಯೆಂದು ನುಡಿದರು.
ದೇವಸ್ಥಾನದ ಪೂಜ್ಯರಾದ ನಾಗೇಶ ಮಹಾರಾಜ ಸ್ವಾಮೀಜಿ ಮಾತನಾಡಿ, ಈ ದೇವಾಲಯವು ಸಾವಿರಾರು ವರ್ಷಗಳ ಹಿನ್ನಲೆ, ಇತಿಹಾಸವನ್ನು ಹೊಂದಿದೆ. ಅಮೂಲ್ಯವಾದ ವಾಸ್ತುಶಿಲ್ಪದಿಂದ ಕೂಡಿದ ಇದಕ್ಕೆ ಕಾಯಕಲ್ಪ ನೀಡುವ ಮೂಲಕ ಅಭಿವೃದ್ಧಿಗೊಳಿಸಬೇಕು. ಇದರ ಬಗ್ಗೆ ಸಂಬಂಧಿಸಿದ ಇಲಾಖೆ, ಸಂಸ್ಥೆ ಗಮನಹರಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ ದೇಗಾಂವ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ಮಹಾದೇವ ಜಾಲಾದಿ, ಈರಣ್ಣ ಅವರಾದಿ, ಬನ್ನಯ್ಯ ಹಿರೇಮಠ, ಹಣಮಂತರಾವ, ಶ್ರೀಜಿತ್ ತುಮಾರನಾವಿಸ್, ರಾಜು ಬರಾಡ್ ಸೇರಿದಂತೆ ಬಡಾವಣೆಯ ನಾಗರಿಕರು, ದೇವಾಲಯದ ಭಕ್ತರು ಭಾಗವಹಿಸಿದ್ದರು.