ಐದನೇ ದಿನದಂದು ಏಳು ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆ

ಕಲಬುರಗಿ:ಏ.18:ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಗುರುವಾರದಂದು ಏಳು ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಭಾರತೀಯ ಜನ ಸಾಮ್ರಾಟ್ ಪಾರ್ಟಿಯ ಅಭ್ಯರ್ಥಿಯಾಗಿ ತಾರಾಬಾಯಿ ವಿಶ್ವೇಶ್ವರಯ್ಯ ಬೋವಿ ಅವರು 2 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ವಿಲಾಸ್ ಎಂ. ಕಣಮಸ್ಕರ್ ಅವರು 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಕಾಶಿನಾಥ ಸಾಯಬಣ್ಣ ಪಾಪಿ ಅವರು 1 ನಾಮಪತ್ರ, ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಆನಂದ ಸಿದ್ದಣ್ಣ ಅವರು 1 ನಾಮಪತ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಉಮೇಶ ಗೋಪಾಲದೇವ ಅವರು 3 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ಶರಣಬಸಪ್ಪ ಪೀರಪ್ಪ ಅವರು 1 ನಾಮಪತ್ರ ಹಾಗೂ ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಹುಚ್ಚಪ್ಪ ಬಸಪ್ಪ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

 ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 15 ಅಭ್ಯರ್ಥಿಗಳಿಂದ 24 ನಾಮಪತ್ರಗಳು ಸಲ್ಲಿಸಿದಂತಾಗಿದೆ.