ಐದು ಹೈಕೋರ್ಟ್‌ಗಳ ಮುಖ್ಯ ನ್ಯಾ.ಮೂರ್ತಿ ನೇಮಕಕ್ಕೆ ಶಿಫಾರಸು

ನವದೆಹಲಿ.ಏ.೨೦- ಮುಖ್ಯ ನ್ಯಾಯಮೂರ್ತಿ ಡಿ.ವೈ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಿದೆ.ಪ್ರತ್ಯೇಕ ನಿರ್ಣಯದಲ್ಲಿ, ಕೊಲಿಜಿಯಂ ಮದ್ರಾಸ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ ರಾಜಾ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾಯಿಸುವ ತನ್ನ ಹಿಂದಿನ ಪ್ರಸ್ತಾಪವನ್ನು ಮತ್ತೊಮ್ಮೆ ಪುನರುಚ್ಚರಿಸಿ ಶಿಫಾರಸ್ಸು ಮಾಡಿದೆ.
ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಕೆ. ಎಂ. ಜೋಸೆಫ್ ಅವರನ್ನು ಒಳಗೊಂಡ ಕೊಲಿಜಿಯಂ ಮದ್ರಾಸ್ , ಕೇರಳ ,ಬಾಂಬೆ , ಹಿಮಾಚಲ ಪ್ರದೇಶ ಎಮತ್ತು ರಾಜಸ್ಥಾನ ಹೈಕೋರ್ಟ್ ಗೆ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸ್ಸು ಮಾಡಿದೆ.
ಕೊಲಿಜಿಯಂ ಸಭೆಯಲ್ಲಿ ನ್ಯಾಯಮೂರ್ತಿ ಆರ್‌ಡಿ ಧನುಕಾ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಶಿಫಾರಸು ಮಾಡಿದೆ ನ್ಯಾಯಮೂರ್ತಿ ಧನುಕಾ ಅವರು ನೇಮಕವಾದಾಗಿನಿಂದ ಹೈಕೋರ್ಟ್‌ಗೆ ವಿಶೇಷ ಸೇವೆ ಸಲ್ಲಿಸಿದ್ದಾರೆ ಎಂದು ಕೊಲಿಜಿಯಂ ತಿಳಿಸಿದೆ.
“ಕಳೆದ ೧೧ ವರ್ಷಗಳಲ್ಲಿ, ಅವರು ಹೈಕೋರ್ಟ್‌ನ ಪ್ಯೂಸ್ನೆ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತದ ಭಾಗದಲ್ಲಿ ಸಾಕಷ್ಟು ಅನುಭವವನ್ನು ಗಳಿಸಿದ್ದಾರೆ. ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಜಸ್ಟೀಸ್ ಧನುಕ ಅವರು ಮೇಲೆ ತಿಳಿಸಿದಂತೆ ಅಲ್ಪಾವಧಿಯ ಅವಧಿ ಹೊಂದಿದ್ದಾರೆ ಎಂದು.. ಕೊಲಿಜಿಯಂ ಅವರನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲು ನಿರ್ಧರಿಸಿದೆ.
ಆಂಧ್ರಪ್ರದೇಶ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಸ್‌ವಿ ಭಟ್ಟಿ ಅವರನ್ನು ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.”ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರು ಕೇರಳದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಎಲ್ಲಾ ರೀತಿಯಲ್ಲೂ ಯೋಗ್ಯರು ಮತ್ತು ಸೂಕ್ತರು ಎಂದು ಕೊಲಿಜಿಯಂ ಹೇಳಿದೆ.ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಹಿಂದಿನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪಂಕಜ್ ಮಿಥಾಲ್ ಅವರನ್ನು ಹರಿಯಾಣ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ಏರಿಸಿದ ಪರಿಣಾಮವಾಗಿ ಈ ಹುದ್ದೆ ಖಾಲಿಯಾಗಿದೆ.ತೆಲಂಗಾಣ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎಂಎಸ್ ರಾಮಚಂದ್ರ ರಾವ್ ಅವರ ಹೆಸರನ್ನು ಹಿಮಾಚಲ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಲು ಕೊಲಿಜಿಯಂ ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ಎಸ್‌ವಿ ಗಂಗಾಪುರವಾಲಾ ಅವರನ್ನು ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಬಗ್ಗೆಯೂ ಕೊಲಿಜಿಯಂ ಪ್ರಸ್ತಾಪಿಸಿದೆ.