ಐಪಿಎಲ್‌ನಿಂದ ಹಿಂದೆ ಸರಿದ ಆಶ್ವಿನ್


ಚೆನ್ನೈ, ಏ ೨೬-ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಐಪಿಎಲ್ ಟೂರ್ನಿಯಿಂದ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಹೊರಗುಳಿಯಲು ತೀರ್ಮಾನಿಸಿದ್ದಾರೆ. ೩೪ ವರ್ಷದ ಅಶ್ವಿನ್ ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ.
ತಮ್ಮ ಕುಟುಂಬ ಸದಸ್ಯರು ಕೋವಿಡ್ ವಿರುದ್ಧ ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಿಂದ ವಿರಾಮ ತೆಗೆದುಕೊಳ್ಳುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಕುಟುಂಬದ ಆಪ್ತರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕಾರಣಕ್ಕಾಗಿ ಟೂರ್ನಿಯಿಂದ ದೂರ ಉಳಿದಿದ್ದೇನೆ. ಎಲ್ಲವೂ ಸರಿಹೋದರೆ ಮತ್ತೆ ಟೂರ್ನಿಗೆ ಮರಳುವ ನಿರೀಕ್ಷೆಯಲ್ಲಿದ್ದೇನೆ. ತಮಗೆ ಅವಕಾಶ ಕೊಟ್ಟಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ ಫ್ರಾಂಚೈಸಿಗೆ ಧನ್ಯವಾದ ತಿಳಿಸಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಪೂರ್ಣ ಬೆಂಬಲ ನಿಮಗಿದೆ. ಡೆಲ್ಲಿ ಕ್ಯಾಪಿಟಲ್ ತಂಡದ ಪರವಾಗಿ ನಿಮಗೆ ಮತ್ತು ನಿಮ್ಮ ಕುಟುಂದ ಸದಸ್ಯರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದೆ.
ಅಶ್ವಿನ್ ಈ ಬಾರಿಯ ಐಪಿಎಲ್‌ನಿಂದ ದೂರ ಉಳಿಯುತ್ತಿರುವ ಮೊದಲ ಆಟಗಾರನಾಗಿದ್ದು, ಐಪಿಎಲ್ ಬಯೋಬಲ್ ಕ್ರಮವನ್ನು ಅನುಸರಿಸುತ್ತಿದ್ದು, ಒಂದು ವೇಳೆ ಅಶ್ವಿನ್ ಮರಳಿ ತಂಡಕ್ಕೆ ಸೇರ್ಪಡಯಾಗಬೇಕಾದರೆ ಕೆಲವು ದಿನಗಳಲ್ಲಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ.
ಈ ಮಧ್ಯೆ, ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಆಡಂ ಜಂಪಾ ಮತ್ತು ಕೇನ್ ರಿಚರ್ಡ್‌ಸನ್ ಐಪಿಎಲ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ಇಬ್ಬರೂ ಆಟಗಾರರು ಆರ್ ಸಿಬಿ ಪರ ಆಡುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ನ ಆಂಡ್ರ್ಯೂ ಟೈ ವೈಯಕ್ತಿಕ ಕಾರಣ ನೀಡಿ ಟೂರ್ನಿಯಿಂದ ಹೊರಗುಳಿದಿದ್ದಾರೆ.