ಐಪಿಎಲ್ ಯುಎಇಗೆ ಸ್ಥಳಾಂತರ

ನವದೆಹಲಿ,. ಮೇ ೨೯- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್- ಐಪಿಎಲ್ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಾಗಿದೆ.
ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಯುಎಇ ನಲ್ಲಿ ಅರ್ಧಕ್ಕೆ ನಿಂತಿರುವ ಪಂದ್ಯಾವಳಿ ಆಯೋಜಿಸಲು ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ನೇತೃತ್ವದಲ್ಲಿಂದು ನಡೆದ ವಿಶೇಷ ಆಡಳಿತ ಮಂಡಳಿ ಸಭೆಯಲ್ಲಿ ಐಪಿಎಲ್ ಪಂದ್ಯಾವಳಿಯಲ್ಲಿ ಯುಎಇ ಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ಕೆಲವು ಆಟಗಾರರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಾವಳಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು.

ಅರ್ಧಕ್ಕೆ ನಿಂತಿರುವ ಐಪಿಎಲ್ ಪಂದ್ಯಾವಳಿಯನ್ನು ದೇಶದಲ್ಲಿ ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಾಗಿತ್ತು. ಆದರೆ ಇದೀಗ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರ ಮಾಡಿ ಆಯೋಜಿಸಲು ನಿರ್ಧರಿಸಲಾಗಿತ್ತು.ಬದಲಾದ ಸನ್ನಿವೇಶದಲ್ಲಿ ವಿದೇಶದಲ್ಲಿ ಪಂದ್ಯ ಆಯೋಜಿಸಲು ಮುಂದಾಗಿದೆ.

ಈ ಕುರಿತು ವಿಷಯ ಖಚಿತಪಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಅರ್ಧದಿಂದ ಸ್ಥಗಿತಗೊಂಡಿರುವ ಐಪಿಎಲ್ ಪಂದ್ಯಾವಳಿಗಳು ಯುಎಇ ನಲ್ಲಿ ನಡೆಯಲಿವೆ ಎಂದು ತಿಳಿಸಿದ್ದಾರೆ.

ಪಂದ್ಯಾವಳಿ ಯಾವಾಗ ನಡೆಯಲಿದೆ ಎನ್ನುವ ಕುರಿತು ಅತಿಶೀಘ್ರದಲ್ಲಿ ಮಾಹಿತಿಯನ್ನು ನೀಡಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಸೋಂಕು ಸಂಖೆ ನಿತ್ಯ ಏರಿಕೆಯಾಗುತ್ತಿರುವ ಹಿನದಲೆಯಲ್ಲಿ ಈ ತಿಂಗಳ ಮೊದಲವಾರದಲ್ಲಿ ಐಪಿಎಲ್ ಪಂದ್ಯಾವಳಿಯನ್ನು ರದ್ದು ಮಾಡಲಾಗಿತ್ತು