ಐವರ್ನಾಡು ಗ್ರಾಮ ಪಂಚಾಯಿತಿ ಮಟ್ಟದ ಕೋವಿಡ್ ಕಾರ್ಯಪಡೆ ಸಭೆ

ಸುಳ್ಯ, ಮೇ ೨೨- ಐವರ್ನಾಡು ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮೀಣ ಕೋವಿಡ್ ಕಾರ್ಯಪಡೆ ಸಮಿತಿಯ ಸಭೆಯು ಇತ್ತಿಚೇಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋರೋನಾ ಸೋಂಕು ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪಂಚಾಯಿತಿಯ ಆಯ್ದ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಕುರಿತು, ಕೋವಿಡ್ ಲಸಿಕೆ ಹಂಚಿಕೆ ಶಿಬಿರವನ್ನು ಐವರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸುವ ಬಗ್ಗೆ. ಐವರ್ನಾಡು ಗ್ರಾಮ ವ್ಯಾಪ್ತಿಯಲ್ಲಿ ವಾರ್ಡ್ ವಾರು ಪಡಿತರ ಹಂಚಿಕೆ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯಿತಿ ಸದಸ್ಯ ಎಸ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಚೆಮ್ನೂರು, ಉಪಾಧ್ಯಕ್ಷ ವಿಕ್ರಂ ಪೈ, ನಿರ್ದೇಶಕರು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಪುಷ್ಪಾವತಿ,ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಕಿರಿಯ ಆರೋಗ್ಯ ಸಹಾಯಕಿ, ಕೋವಿಡ್ ಕರ್ತವ್ಯದಲ್ಲಿರುವ ಶಿಕ್ಷಕರು, ಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು.ಡಿ. =ಶೇಖರ್ ಸ್ವಾಗತಿಸಿ, ವಂದಿಸಿದರು.