
ಪ್ಯಾನ್ ಇಂಡಿಯಾ ಚಿತ್ರ ಎಂಗೇಜ್ಮೆಂಟ್ ಚಿತ್ರಕ್ಕೆ ಐಶ್ವರ್ಯಾ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಪ್ರವೀಣ’ ಚಿತ್ರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ, ‘ಎಂಗೇಜ್ಮೆಂಟ್’ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ‘ಪ್ರವೀಣ’ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದರು
ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ ಹೇಗೆ ದಾಸರಾಗುತ್ತಿದ್ದಾರೆ ಎಂದು ಸಾರುವ ಈ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮೊದಲೇ, ಅದೇ ನಿರ್ದೇಶಕರ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವಾದ ‘ಎಂಗೇಜ್ಮೆಂಟ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಹೊಸ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ಐಶ್ವರ್ಯ ಗೌಡ,, ‘ನನಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಅಪಾರವಾದ ಆಸಕ್ತಿ. ಅದೇ ಆಸಕ್ತಿಯಿಂದ ‘ಜಾಗ್ವಾರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದೆ. ‘ಪ್ರವೀಣ’ ಚಿತ್ರ ಒಳ್ಳೆಯ ಬ್ರೇಕ್ ನೀಡಿತು. ಚಿತ್ರದಿಂದ ನನಗೆ ‘ರೇವ್ ಪಾರ್ಟಿ’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದರಲ್ಲಿನ ಅಭಿನಯದ ನೋಡಿ ನ ‘ಎಂಗೇಜ್ಮೆಂಟ್’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶ ನೀಡಿದ್ದಾರೆ. ಈ ಚಿತ್ರ ಸಹ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಯಶಸ್ಸು ಕಾಣಲಿದೆ ಎಂಬ ನಂಬಿಕೆ ನನಗಿದೆ’ ಎಂದು ಹೇಳುತ್ತಾರೆ.
‘ಎಂಗೇಜ್ಮೆಂಟ್’ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.