ಐಸಿಸಿ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಗೆ 5, ರಾಹುಲ್ ಗೆ 8ನೇ ಸ್ಥಾನ

ದುಬೈ, ನ.3- ಐಸಿಸಿ ಪ್ರಕಟಿಸಿರುವ ನೂತನ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡದ ಐದನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಹಾಗೂ 8ನೇ ಸ್ಥಾನದಲ್ಲಿ ಕೆ.ಎಲ್.ರಾಹುಲ್ 8ನೇ ಸ್ಥಾನದಲ್ಲಿ ಯಾವುದೇ ಮುಂದುವರಿದಿದ್ದಾರೆ.
ಆರಂಭಿಕ ಆಟಗಾರ ರೋಹಿತ್ ಶರ್ಮಾ 23ನೇ ಸ್ಥಾನಕ್ಕೇರಿದ್ದಾರೆ. ಬೌಲರ್ ಜಸ್ಪ್ರೀತ್ ಬುಮ್ರಾ 10 ಸ್ಥಾನ ಏರಿಕೆ ಕಂಡು 24ನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್​ ವಿಶ್ವಕಪ್​ನಲ್ಲಿ ಸಿಡಿಸಿದ ಎರಡು ಅರ್ಧಶತಕಗಳಿಂದಾಗಿ ಇಂಗ್ಲೆಂಡ್​​ನ ಡೇವಿನ್ ಮಲನ್ ಹಿಂದಿಕ್ಕಿ ಟಿ20 ಬ್ಯಾಟಿಂಗ್​​​​​ ಪಟ್ಟಿಯಲ್ಲಿ ಅಗ್ರಪಟ್ಟಕ್ಕೇರಿದ್ದಾರೆ.
ಇದು ಬಾಬರ್ ವೃತ್ತಿ ಜೀವನದಲ್ಲಿ 6ನೇ ಬಾರಿ ಮೊದಲ ಸ್ಥಾನ ಅಲಂಕರಿಸಿದ್ದಾರೆ. , ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲೂ ಬಾಬರ್ ಮೊದಲ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಇಂಗ್ಲೆಂಡ್​ನ ಮಲನ್​​ಗಿಂತಲೂ 36 ಅಂಕ ಹೆಚ್ಚು ಪಡೆದು ಒಟ್ಟು 834 ಅಂಕಗಳ ಮೂಲಕ ಮೊದಲ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.
ಟೂರ್ನಿಯಲ್ಲಿ ಇಂಗ್ಲೆಂಡ್ ತಂಡದ ಜೋ ಬಟ್ಲರ್ ಮತ್ತು ಜೇಸನ್ ರಾಯ್​​ ಪಟ್ಟಿಯಲ್ಲಿ ಮೇಲ್ದರ್ಜೆಗೇರಿದ್ದಾರೆ. ಟಿ20ಯಲ್ಲಿ ಮೊದಲ ಶತಕ ಸಿಡಿಸಿದ ಜೋಸ್ ಬಟ್ಲರ್ 8 ಸ್ಥಾನ ಏರಿಕೆ ಕಂಡು 9ನೇ ಸ್ಥಾನ ಪಡೆದಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಶ್ರೀಲಂಕಾದ ವಾನಿಂದು ಹಸರಂಗ 776 ಅಂಕಗಳ ಮೂಲಕ ಮೊದಲ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ದಕ್ಷಿಣ ಆಫ್ರಿಕದ ಅನ್ರಿಚ್ ನೋರ್ಟ್ಜೆ 18 ಸ್ಥಾನ ಏರಿಕೆ ಕಂಡು 7ನೇ ಸ್ಥಾನ ಗಳಿಸಿದ್ದಾರೆ.
ಆಲ್ ರೌಂಡರ್ ವಿಭಾಗದಲ್ಲಿ ಭಾರತದ ಯಾವುದೇ ಆಟಗಾರ ಸ್ಥಾನಗಳಿಸುವಲ್ಲಿ ವಿಫಲರಾಗಿದ್ದಾರೆ.