ಐ ಎಫ್ ಬಿ ಕಂಪನಿಗೆ ಜಿಎಂಐಟಿಯ 24 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ. ಮೇ.೧೭; ಇತ್ತೀಚಿಗೆ ನಡೆದ ಐ ಎಫ್ ಬಿ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 24 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗವಕಾಶಗಳು ದೊರೆತಿದ್ದು, ಮಿಡಲ್ಬೇ, ಕಿರ್ಲೋಸ್ಕರ್ ಫೆರಸ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್, ಟೊಯೋಟಾ ಆಟೋ ಪಾರ್ಟ್ಸ್, ಐ ಎಫ್ ಬಿ ಮುಂತಾದವುಗಳಾಗಿವೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ಕೈಗಾರಿಕಾ ವಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಇನ್ನು ಹೆಚ್ಚಿನ ಕಂಪನಿಗಳು ಸಂದರ್ಶನ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ ಎಂದು ಇದೆ ವೇಳೆ ತಿಳಿಸಿದರು. ಈ ಮೂಲಕ ಪ್ರಸಕ್ತ ವರ್ಷದ ಜಿಎಂಐಟಿ ಕಾಲೇಜಿನ ಒಟ್ಟು ಜಾಬ್ ಆಫರ್ಸ್ 600 ರ ಗಡಿಯನ್ನು ತಲುಪಿದೆ ಎಂದು ಹರ್ಷವನ್ನು ವ್ಯಕ್ತಪಡಿಸಿದರು. ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಶ್ರೀ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ಶ್ರೀ ವೈಯೂ ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ಶ್ರೀನಿವಾಸ್ ಸಿವಿ, ಪ್ಲೇಸ್ಮೆಂಟ್ ವಿಭಾಗದ ಸಂಯೋಜಕರಾದ ಪ್ರೊ ಪ್ರಶಾಂತ್ ಮತ್ತು ವಿಭಾಗದ ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.