ಸಂಜೆವಾಣಿ ವಾರ್ತೆ
ಬಳ್ಳಾರಿ,ಸೆ.27: ಶಾಲೆಯ ಒಂದರಿಂದ ಎಂಟನೇ ತರಗತಿವರೆಗಿನ ಎಲ್ಲಾ ಮಕ್ಕಳು ತಪ್ಪದೇ ಜಾತಿ ಪ್ರಮಾಣ ಪತ್ರ ಪಡೆದು, 2023-24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು. ಆ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರು ಹಾಗೂ ಮುಖ್ಯ ಗುರುಗಳು ಹೆಚ್ಚಿನ ಗಮನಹರಿಸಬೇಕು ಎಂದು ಬಳ್ಳಾರಿ ನಗರದ ಕಂದಾಯ ನಿರೀಕ್ಷಕರಾದ ರಾಮಕೃಷ್ಣ ಅವರು ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿನೀಡಿ ಮುಖ್ಯ ಗುರುಗಳು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿದ ಅವರು ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸಲು ಎಲ್ಲರೂ ಶ್ರಮವಹಿಸಬೇಕು ಎಂದರು.
ಶಾಲೆಯ ಮುಖ್ಯ ಗುರುಗಳಾದ ರವಿಚೇಳ್ಳಗುರ್ಕಿ, ಗ್ರಾಮ ಲೆಕ್ಕಾಧಿಕಾರಿಗಳಾದ ಸಂಧ್ಯಾ, ಬಿ.ಎಲ್,ಓ ಗಳಾದ ವಿ.ಬಸವರಾಜ,ಮೋದಿನ್ ಸಾಬ್,ಆಶಾ ಕಾರ್ಯಕರ್ತೆಯರಾದ ಯಶೋಧ,ಸುಶೀಲಾ ಹಾಗೂ ತಳವಾರ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.