ಒಂದು ಗಂಟೆವರೆಗಷ್ಟೇ ಹೊಸವರ್ಷಾಚರಣೆಗೆ ಅವಕಾಶ

ಸಂಜೆವಾಣಿ ನ್ಯೂಸ್
ಮೈಸೂರು: ಡಿ.29:- ಪ್ರತಿ ವರ್ಷದಂತೆ ಈ ಬಾರಿಯೂ ಸಹ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ತಡರಾತ್ರಿ 1ಗಂಟೆವರೆಗಷ್ಟೇ ಅನುಮತಿ ನೀಡಿರುವುದಾಗಿ ನಗರ ಪೆÇಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.
ನಗರದಲ್ಲಿರುವ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಡಿ.31ರ ರಾತ್ರಿ ಹೊಸ ವರ್ಷ ಆಚರಣೆ ನೆಪದಲ್ಲಿ ವಿದ್ಯಾರ್ಥಿಗಳು,ಯುವಕರು ಯಾವುದೇ ಕಾರಣಕ್ಕೂ ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸಬಾರದು. ವರ್ತಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಜೂಟಾಟ ನಡೆಸುವುದನ್ನು ನಿಷೇಸಲಾಗಿದೆ. ಜತೆಗೆ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮೈಸೂರು ನಗರದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ರಚಿಸಲಾಗಿದೆ ಎಂದು ಹೇಳಿದರು.
ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಹಿಳೆಯರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಅವರ ಸುರಕ್ಷತೆ ದೃಷ್ಟಿಯಿಂದ ಚಾಮುಂಡಿ ಹೆಸರಿನ ಮಹಿಳಾ ಪೆÇಲೀಸ್ ಅಧಿಕಾರಿಗಳಿರುವ ವಿಶೇಷ ಪಡೆ ರಚಿಸಲಾಗಿದೆ. ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ರಚಿಸಲಾಗಿದ್ದು, ಅಂದು ರಾತ್ರಿ ನಗರದಲ್ಲಿ ಓಡಾಟ ನಡೆಸಲಿದೆ. ಒಂದು ವೇಳೆ ಯುವತಿಯರಿಗೆ ಕೀಟಲೆ ಮಾಡುವುದು ಕಂಡುಬಂದರೆ ಅಂತಹವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಹಿಳೆಯರು ಹೆಚ್ಚಾಗಿ ಸೇರಿರುವ ಅರಮನೆ ಸೇರಿದಂತೆ ಕೆಲವೆಡೆ ಈ ಚಾಮುಂಡಿ ಪಡೆ ವಾಹನ ಸಂಚರಿಸಿ ಪುಂಡರ ಮೇಲೆ ನಿಗಾವಹಿಸಲಿದೆ ಎಂದು ಹೇಳಿದರು.
ಸಾವಿರಕ್ಕೂ ಹೆಚ್ಚು ಪೆÇಲೀಸರನ್ನು ನಿಯೋಜಿಸಲಾಗಿದ್ದು, 300 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈಗಾಗಲೇ ಹೊಸ ವರ್ಷದ ಆಚರಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗಿದ್ದು, ಅನುಮಾನಸ್ಪದರ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅರಮನೆ ಆವರಣದಲ್ಲಿ ವಿಶೇಷವಾಗಿ ಹೊಸ ವರ್ಷ ಆಚರಣೆ ಕಾರ್ಯಕ್ರಮ ಇರುವುದರಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಸೇರಲಿದ್ದಾರೆ. ಈ ಹಿನ್ನಲೆಯಲ್ಲಿ ಅರಮನೆ ಸುತ್ತ ಹೆಚ್ಚು ಪೆÇಲೀಸರನ್ನು ನಿಯೋಜಿಸಲಾಗುವುದು ಎಂದರು.
ಅನುಮತಿ ಕಡ್ಡಾಯ:
ಸಂತೋಷ ಕೂಟ ನಡೆಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವೀಸ್ ಅಪಾಟ್ರ್ಮೆಂಟ್, ಅಪಾರ್ಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘ ಸಂಸ್ಥೆಗಳು ಡಿ.30ರೊಳಗೆ ನಗರ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಎಂ. ಮುತ್ತುರಾಜ್, ಜಾಹ್ನವಿ ಇದ್ದರು.