ಒಂದು ವಾರ ರಾಜ್ಯದಲ್ಲಿ ಮಳೆ ನಿರೀಕ್ಷೆ

ಬೆಂಗಳೂರು, ಮೇ.೨೦-ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಇನ್ನು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೂಡ ಅಬ್ಬರದ ಮಳೆ ಸುರಿಯಲಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಜತೆಗೆ ಇಂದಿನಿಂದ ೭ ದಿನಗಳ ಕಾಲ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಭಾರೀ ಮಳೆ ಸುರಿಯುವ ಮಳೆಯಾಗುವ ಸಾಧ್ಯತೆ ಇದೆ.
ಹಾಗಾಗಿ, ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮೇ ೨೦ರಿಂದ ಮುಂದಿನ ೫ ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆಯೂ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ ೪೦ ರಿಂದ ೫೦ ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜಲಮೂಲಗಳಿಗೆ ಜೀವಕಳೆ ಬಂದಂತಾಗಿದೆ. ಅಲ್ಲದೆ, ಇಷ್ಟು ದಿನ ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಇದರಿಂದ ಸಾಕಷ್ಟು ನಷ್ಟವೂ ಆಗಿ ಜನರು ಸಂಕಷ್ಟಕ್ಕೆ ಸಿಲುಕಿರುವಂತಹ ಪರಿಸ್ಥಿತಿಗಳು ಕೂಡ ನಿರ್ಮಾಣವಾಗಿವೆ.