ಒಂದೇದಿನ 44 ಸಾವಿರ ಮಂದಿಗೆ ಸೋಂಕು

ನವದೆಹಲಿ ನವೆಂಬರ್ ೧೪. ದೇಶಾದ್ಯಂತ ಕೋರೋ ನಾ ಮಹಾಮಾರಿಯ ತೀವ್ರತೆ ಕಡಿಮೆಯಾಗಿಲ್ಲ. ಸಾಂಕ್ರಾಮಿಕ ರೋಗದ ಉಪಟಳ ಮುಂದುವರಿದಿದ್ದು ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೪ ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು ಜನರಲ್ಲಿ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೪ ಸಾವಿರದ ೬೮೪ ಸೋಂಕು ಪ್ರಕರಣಗಳು ಹೊಸದಾಗಿ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟಾರೆ ದೇಶದಲ್ಲಿ ೮೭ ಲಕ್ಷ ೭೩ ಸಾವಿರದ ೪೭೯ ಮಂದಿಗೆ ಸೋಂಕು ತಗುಲಿ ದಂತಾಗಿದೆ.

ಇಂದು ಬೆಳಗ್ಗೆ ದೊರೆತ ಮಾಹಿತಿ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಿದ್ದು ಪ್ರಸ್ತುತ ೪ ಲಕ್ಷದ ೮೦ ಸಾವಿರದ ೭೧೯ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೂ ಚೇತರಿಕೆ ಕಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು ಪ್ರಸ್ತುತ ಸಂಖ್ಯೆ ೮೧ ಲಕ್ಷ ದಾಟಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೂ ೮೧ ಲಕ್ಷದ ೬೩ ಸಾವಿರದ ೩೫೨ ರೋಗಿಗಳು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ತೆರಳಿದ್ದಾರೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೨೦ ಸೋಂಕಿತರು ಗುಣಮುಖರಾಗದೇ ಸಾವನ್ನಪ್ಪಿದ್ದಾರೆ. ಇದರಿಂದ ಇರುವರೆಗೂ ಮಹಾಮಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ ೧ ಲಕ್ಷದ ೨೯ ಸಾವಿರದ ೧೮೮ ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇದಿನೇ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಒತ್ತಡ ಶೇಕಡ ೫. ೫೫ ರ ಷ್ಟು ಇದೆ ಎಂದು ಹೇಳಲಾಗಿದೆ. ಇದರೊಂದಿಗೆ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗುವ ಪ್ರಮಾಣಕ್ಕಿಂತ ಗುಣಮುಖ ರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ತೆರಳುತ್ತಿರುವ ಸಂಖ್ಯೆ ಹೆಚ್ಚಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಸೂಚನೆ ಹಿನ್ನೆಲೆಯಲ್ಲಿ ಒಟ್ಟಾರೆ ಸಾಂಕ್ರಾಮಿಕ ರೋಗದ ಹರಡುವಿಕೆ ಕಡಿಮೆಯಾಗುತ್ತಿದೆ ಎಂಬ ಭಾವನೆ ಮೂಡುವಂತಾಗಿದೆ.

ಚೇತರಿಕೆ ಪ್ರಮಾಣ ಹೆಚ್ಚಳ

ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ವರ ಸಂಖ್ಯೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಈ ಪ್ರಮಾಣ ಶೇಕಡಾ ೯೨. ೯೭ ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಗುಣಮುಖ ಆಗುತ್ತಿರುವ ಹೆಚ್ಚಿನ ಸಂಖ್ಯೆ ದೇಶದ ೧೦ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಭಾರತದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಜಾಗತಿಕ ಕೇಂದ್ರವೊಂದನ್ನು ಪ್ರಾರಂಭ ಮಾಡಲು ಉದ್ದೇಶಿಸಿರುವುದಾಗಿ ವಿಶ್ವ ಆರೋಗ್ಯ ಸಂಘಟನೆ ನಿನ್ನೆ ಹೇಳಿದೆ. ಸಂಘಟನೆಯ ಮಹಾನರ್ದೇಶಕ ಟೆಡ್ ರೋಸ್ ಅದ್ಧಾ ನಮ್ ಗೆ ಬ್ರಿಯೋ ಸಿಸ್ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

೨೦೧೪-೨೦೨೩ ರ ಅವಧಿಗೆ ಸಾಂಪ್ರದಾಯಿಕ ವೈದ್ಯಕೀಯ ಚಿಕಿತ್ಸಾ ಪದ್ಧತಿಯನ್ನು ಬಲಪಡಿಸಲು ಅಗತ್ಯವಿರುವ ನಿಯಮಗಳನ್ನು ಈ ಸಂಸ್ಥೆ ರೂಪಿಸಲಿದೆ ಎಂದು ಅವರು ಹೇಳಿದ್ದಾರೆ. ವಿವಿಧ ದೇಶಗಳಿಗೆ ಬೆಂಬಲ ನೀಡುವುದು ಈ ಸಂಸ್ಥೆಯ ಉದ್ದೇಶವಾಗಿರಲಿದೇ ಎಂದು ಅವರು ಹೇಳಿದ್ದಾರೆ.

ದೇಶದ ಜನರ ಆರೋಗ್ಯರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿರುವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ಧತೆಯನ್ನು ವಿಶ್ವ ಆರೋಗ್ಯ ಸಂಘಟನೆಯ ಮಹಾ ನಿರ್ದೇಶಕರು ಶ್ಲಾಘಿಸಿದ್ದಾರೆ.