ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು!

ಮಂಚಿರ್‍ಯಾಲ: ಒಂದೇ ಕುಟುಂಬದ ನಾಲ್ವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಸಿಪೇಟ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ಅತ್ತೆ ಮನೆಯಿಂದ ತವರಿಗೆ ಬಂದಿದ್ದ ಮಗಳಿನೊಂದಿಗೆ ಮಗ ಮತ್ತು ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು,ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಇಡೀ ಪ್ರಕರಣ ನಿಗೂಢವಾಗಿ ಪರಿಣಮಿಸಿದೆ.
ಈ ಸಂಬಂಧ ಕಾಸಿಪೇಟ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೆ ಸತ್ಯಾಂಶ ಬೆಳಕಿಗೆ ಬರಬೇಕಾಗಿದೆ.