
ಮೈಸೂರು,ಆ.27- ಒಂದೇ ಕುಟುಂಬದ ನಾಲ್ವರು ಮನೆಯಲ್ಲಿ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಚಾಮುಂಡಿ ಪುರಂನಲ್ಲಿ ನಡೆದಿದೆ.
ಚಾಮುಂಡಿಪುರಂನ ಮನೆಯಲ್ಲಿ ಮಹದೇವ ಸ್ವಾಮಿ (48), ಇವರ ಪತ್ನಿ ಅನಿತಾ(35), 17 ಹಾಗೂ 15 ವರ್ಷ ವಯಸ್ಸಿನ ಪುತ್ರಿಯರು ಶವವಾಗಿ ಪತ್ತೆಯಾದವರು.
ಮಹದೇವ ಸ್ವಾಮಿ ಶವ ಮನೆಯ ಹಾಲ್ನಲ್ಲಿ ಪತ್ತೆಯಾಗಿದ್ದರೆ,ಪತ್ನಿ ಅನಿತಾ ಮೃತದೇಹ ಕುರ್ಚಿಯ ಮೇಲೆ, ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮತ್ತು ಚಿಕ್ಕ ಮಗಳ ಶವ ಕೊಠಡಿಯಲ್ಲಿ ಪತ್ತೆಯಾಗಿದೆ.
ನಾಲ್ಕು ಶವಗಳು ನಾಲ್ಕು ಕಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಬಹುಶಃ ಒಂದೆರೆಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಹ್ನವಿ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ಸಂಬಂಧ ಕೆ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ವ್ಯವಹಾರಿಕವಾಗಿ ಮಹದೇವ ಸ್ವಾಮಿ ನಷ್ಟ ಅನುಭವಿಸಿದ್ದರಿಂದ ಸಾಲಭಾದೆಗೆ ಸಿಲುಕಿದ್ದರು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.