ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಚಾಮರಾಜನಗರ,ಜೂ.೨೩-ತಂದೆ,ತಾಯಿ, ಮಗಳು ಸೇರಿ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೇಡರಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬೇಡರಪುರದ ಮಹದೇವಸ್ವಾಮಿ(೪೮) ಅವರ ಪತ್ನಿ ಸವಿತಾ, (೪೦) ಮಗಳು ಸಿಂಚನಾ(೧೩) ಆತ್ಮಹತ್ಯೆಗೆ ಶರಣಾದವರು. ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳಿಗ್ಗೆ ಪಕ್ಕದ ಮನೆಯವರು ಹೋಗಿದ್ದಾಗ ಬೆಳಕಿಗೆ ಬಂದ ಪ್ರಕರಣ ಬೆಳಕಿಗೆ ಬಂದಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.