ಒಕ್ಕಲಿಗರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಪುರಸ್ಕಾರ


ದಾವಣಗೆರೆ.ಜು.೨೫: ಜಿಲ್ಲಾ ಒಕ್ಕಲಿಗರ ಸಂಘದಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕನೇ ವರ್ಷದ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ 15 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಶಾಲು ಹೊದಿಸಿ ಪ್ರಶಸ್ತಿ ಫಲಕ ಮತ್ತು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅರ್ಥಿಕ ನೆರವು ನೀಡಿ ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ವಿಎನ್ ಅಶೋಕ್, ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಜು, ಬಿ.ಎನ್ ಮಲ್ಲೇಶ್ , ಡಿ ಎನ್ ಜಗದೀಶ್, ಚಂದ್ರಶೇಖರ್, ನಾಗರಾಜ್ ಸೇರಿದಂತೆ ಒಕ್ಕಲಿಗ ಸಮಾಜದ ಬಾಂಧವರು ಪದಾಧಿಕಾರಿಗಳು ಭಾಗವಹಿಸಿದ್ದರು.