ಒಡಿಶಾದಲ್ಲಿ ಬಿಜೆಪಿ ಯುಗ: ಸಿಎಂ ಚರಣ್ ಮಾಝಿ ಅಧಿಕಾರ ಪ್ರಮಾಣ

ಭುವನೇಶ್ವರ: ನಾಲ್ಕು ಬಾರಿ ಶಾಸಕರಾಗಿರುವ ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಒಡಿಶಾದಲ್ಲಿ ಇದೇ ಮೊದಲ ಬಾರಿಗೆಬಿಜೆಪಿ ಯುಗ ಆರಂಭವಾಗಿದೆ.ರಾಜಧಾನಿ ಭುವನೇಶ್ವರದ ಜನತಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ರಘುಬರ್ ದಾಸ್ ಅವರು ಮೋಹನ್ ಮಾಝಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯಮಂತ್ರಿಗಳ ಜೊತೆ ಬಿಜೆಪಿಯ ಹಿರಿಯ ನಾಯಕ ಕೆ.ವಿ.ಸಿಂಗ್ ದೇವು ಮತ್ತು ಪರವತಿ ಪರೀದಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಭೂಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್, ಜುಯಲ್ ಓರಮ್, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.