ಒಡಿಶಾದಲ್ಲಿ ಭೀಕರ ರೈಲು ಅಪಘಾತ: 50ಕ್ಕೂ ಮಂದಿ ಸಾವು, ನೂರಾರು ಜನರಿಗೆ ಗಾಯ

ಭುವನೇಶ್ವರ , ಜೂ.2-ಒಡಿಶಾ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಕೋರಮಂಡಲ್​ ಎಕ್ಸ್​ಪ್ರೆಸ್​ ರಲು ಅಪಘಾತಕ್ಕೀಡಾಗಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 170 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಮೂಲಗಳ ಪ್ರಕಾರ ಬಲಸ್ವರ್ ಜಿಲ್ಲೆಯ ಬಹಂಗಾ ಬಳಿ ಎಕ್ಸ್​ಪ್ರೆಸ್​ ರೈಲು ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದಿದೆ . ಈ ವೇಳೆ 4 ಭೋಗಿಗಳು ಹಳಿ ತಪ್ಪಿದೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಮ್ಮ ಸಂಬಂಧಿಕರನ್ನು ಕಳೆದುಕೊಂಡವರ ರೋದನ ಮುಗಿಲು ಮುಟ್ಟಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

10 ಲಕ್ಷ ಪರಿಹಾರ

ಇದೇ ವೇಳೆಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿಗಳ ಪರಿಹಾರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ಼್ಣವ್ ಘೋಷಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ನೀಡುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.