ಒಡಿಶಾದಲ್ಲಿ ಮೇ.೧೬ರವರೆಗೆ ಲಾಕ್

ಒಡಿಶಾ,ಮೇ.೨-ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ ೫ ರಿಂದ ಮೇ ೧೬ ರವರೆಗೆ ೧೪ ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದೆ.
ಲಾಕ್‌ಡೌನ್ ಸಮಯದಲ್ಲಿ ಆರೋಗ್ಯ ರಕ್ಷಣೆ ಅಥವಾ ಇತರ ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಇನ್ನು ೫೦೦ ಮೀ. ವ್ಯಾಪ್ತಿಯಲ್ಲಿ ತೆರಳಿ ಅಗತ್ಯ ವಸ್ತುಗಳ ಖರೀದಿಸಲು ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೧೨ ರವರೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೧೮,೦೧೫ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ೪,೬೨, ೬೨೨ಕ್ಕೆ ಏರಿಕೆಯಾಗಿದೆ.
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಲಾಕ್‌ಡೌನ್ ಮುಂದುವರೆಸಿದೆ.