ಒಡಿಶಾ ವ್ಯಕ್ತಿಯಲ್ಲಿ ರೂಪಾಂತರ ವೈರಸ್ ಪತ್ತೆ

ಒಡಿಶಾ, ಡಿ.೨೪- ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೊನಾ ವೈರಸ್ ಇದೀಗ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಬ್ರಿಟನ್‌ನಿಂದ ಒಡಿಶಾ ರಾಜ್ಯಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬನ ದೇಹದಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.

ಇದೇ ತಿಂಗಳ ೧೮ರಂದು ೩೪ ವರ್ಷಯೊರ್ವ ಯುಕೆಯಿಂದ ಒಡಿಶಾ ರಾಜ್ಯ ರಾಜಧಾನಿ ಒಡಿಶಾಗೆ ಬಂದಿದ್ದ. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ಪಿ.ಸಿ.ಚೌಧರಿ ಹೇಳಿದ್ದಾರೆ.

ಸದ್ಯ ಸೋಂಕಿತ ವ್ಯಕ್ತಿಯನ್ನು ಸರ್ಕಾರಿ ಸಿಒವಿಐಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈತನಿಗೆ ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದೆ. ಇನ್ನೂ ರೂಪಾಂತರ ಸೋಂಕಿನ ಕುರಿತು ಆತನ ಗಂಟಲು ದ್ರವವನ್ನು ಭುವನೇಶ್ವರ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ರವಾನಿಸಲಾಗಿದೆ.

ಒಡಿಶಾ ವಿಮಾನ ನಿಲ್ದಾಣದಲ್ಲಿ ಜೆನೆಸ್ಟ್ರಿಂಗ್ಸ್ ಎಲ್ಲಾ ಪ್ರಯಾಣಿಕರ ಕೊರೋನಾ ವೈರಸ್ ಪರೀಕ್ಷೆಯನ್ನು ನಿರ್ವಹಿಸುತ್ತಿದೆ. ಬ್ರಿಟನ್‌ನಿಂದ ಆಗಮಿಸಿದ ವಿಮಾನಗಳ ಪ್ರಯಾಣಿಕರನ್ನು ಸಾಂಸ್ಥಿಕ ಸಂಪರ್ಕ ತಡೆಗೆ ಒಳಪಡಿಸಲಾಗಿದೆ.

ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪ್ರಭೇದ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆಗೊಳಿಸಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿತ್ತು ಎಂದು ವಿಮಾನ ನಿಲ್ದಾಣದ ಕಾರ್ಯನಿರ್ವಾಹಕ ನಿರ್ದೇಶಕ ಗೌತಮ್ ರೇ ತಿಳಿಸಿದ್ದಾರೆ.