ಒಡಿಶಾ:22 ಜಾತಿಗಳು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ

ಭುವನೇಶ್ವರ್ ನಗರ,ಜ.22- ಒಡಿಶಾ ರಾಜ್ಯದಲ್ಲಿ 22 ಜಾತಿಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

“ಒಡಿಶಾ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ, 1993 ರ ಪ್ರಸ್ತಾವಿತ ತಿದ್ದುಪಡಿಗೂ ಕೂಡ ಸಚಿವ ಸಂಪುಟ ಸಮ್ಮಿತಿ ನೀಡಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ, ಸೆಕ್ಷನ್- 9 ರ ಅಡಿಯಲ್ಲಿ ಉಪವಿಭಾಗ 3 ಅನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಅಂತಹ ಹಿಂದುಳಿದ ವರ್ಗಗಳನ್ನು ಹಿಂದುಳಿದ ವರ್ಗಗಳ ರಾಜ್ಯ ಪಟ್ಟಿಯಲ್ಲಿ ಸೇರಿಸಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದ್ದಾರೆ.

ಒಡಿಶಾ ರಾಜ್ಯದ ಹಿಂದುಳಿದ ವರ್ಗಗಳ ಕೇಂದ್ರ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳನ್ನು ನಿರ್ದಿಷ್ಟಪಡಿಸಿದ್ದರೆ,” ಒಡಿಶಾ ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

ಭಾರತದ ಸಂವಿಧಾನದ 15(4) ವಿಧಿ ಯಾವುದೇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರ ಪ್ರಗತಿಗೆ ಯಾವುದೇ ವಿಶೇಷ ನಿಬಂಧನೆಗಳನ್ನು ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೇಳಿದೆ.

ಭಾರತದ ಸಂವಿಧಾನದ 46 ನೇ ವಿಧಿ ಅಡಿ ರಾಜ್ಯ ಸರ್ಕಾರ ದುರ್ಬಲ ವರ್ಗದ ಜನರ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ವಿಶೇಷ ಕಾಳಜಿಯೊಂದಿಗೆ ಉತ್ತೇಜಿಸುತ್ತದೆ.ಸಾಮಾಜಿಕ ಅನ್ಯಾಯ ಮತ್ತು ಎಲ್ಲಾ ರೀತಿಯ ಶೋಷಣೆಯಿಂದ ಅವರನ್ನು ರಕ್ಷಿಸಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದೆ.

“ಪ್ರಸ್ತುತ, 22 ಜಾತಿಗಳು,ಸಮುದಾಯಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಿರುವ ಹಿನ್ನೆಲೆಯಲ್ಲಿ ಈ ಸಮುದಾಯಗಳ ಪ್ರಗತಿಗೆ ಪೂರಕವಾಗಲಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.