ಒಣದ್ರಾಕ್ಷಿ ಆರೋಗ್ಯಕರ ಲಾಭ

ಒಣದ್ರಾಕ್ಷಿ ಹಲವು ಪೋಷಕಾಂಶಗಳ ಆಗರವಾಗಿದೆ. ಒಣಫಲಗಳ ಪಟ್ಟಿಯಲ್ಲಿ ಒಣದ್ರಾಕ್ಷಿಯೂ ಒಂದು. ಯಕೃತ್‌ನ (ಲಿವರ್) ಆರೋಗ್ಯ ಈ ನೀರಿನ ನಿಯಮಿತ ಸೇವನೆಯಿಂದ ಉತ್ತಮಗೊಳ್ಳುತ್ತದೆ. ಇದೇ ಕಾರಣಕ್ಕೆ ಈ ನೀರನ್ನು ಕೆಲವಾರು ಟಾನಿಕ್ ಮತ್ತು ಔಷಧಿಗಳಲ್ಲಿ ಬಳಸಲಾಗುತ್ತಿದೆ.

ಸುಮಾರು ಹತ್ತು ಹನ್ನೆರಡು ಒಣದ್ರಾಕ್ಷಿಗಳನ್ನು ರಾತ್ರಿ ನೆನೆಸಿ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವ ಮೂಲಕ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ.

ಈ ಪುಟ್ಟ ಒಣಫಲದಲ್ಲಿ ಹಲವಾರು ಪೋಷಕಾಂಶಗಳಿದ್ದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ಪ್ರತಿದಿನ ಒಂದು ಲೋಟ ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಕುಡಿಯುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸಬಹುದು.

ಒಣ ದಾಕ್ಷಿ ಅಥವಾ ನೆನೆಸಿಟ್ಟ ದಾಕ್ಷಿಯ ಸೇವನೆಯಿಂದ ಸಣ್ಣಕರುಳಿನಲ್ಲಿರುವ ವ್ಯರ್ಥ ಪದಾರ್ಥಗಳನ್ನು ಸುಲಭವಾಗಿ ಹೊರಹಾಕುತ್ತದೆ.

ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇರುತ್ತವೆ. ಇದರೊಂದಿಗೆ ಇರುವ ಇನ್ನೂ ಹಲವು ಸೂಕ್ಷ್ಮ ಪೋಷಕಾಂಶಗಳು ಈ ಕ್ಯಾಲ್ಸಿಯಂ ಅನ್ನು ಮೂಳೆಗಳು ಹೀರಿಕೊಳ್ಳಲು ನೆರವಾಗುವ ಮೂಲಕ ಮೂಳೆಗಳು ಆರೋಗ್ಯಕರ ಮತ್ತು ದೃಢವಾಗುತ್ತವೆ.

ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕಬ್ಬಿಣವೂ ಇದೆ. ನೀರಿನಲ್ಲಿ ನೆನೆಸಿಟ್ಟ ಒಣದ್ರಾಕ್ಷಿಯನ್ನು ಸೇವಿಸುವ ಮೂಲಕ ದೇಹದಲ್ಲಿ ಕಬ್ಬಿಣದ ಪ್ರಮಾಣ ಹೆಚ್ಚುತ್ತದೆ ಹಾಗೂ ರಕ್ತಹೀನತೆಯ ತೊಂದರೆಯಿಂದ ರಕ್ಷಿಸುತ್ತದೆ.

ಮೂತ್ರಪಿಂಡಗಳಲ್ಲಿ ಸಂಗ್ರಹವಾಗಿದ್ದ ಕಲ್ಮಶಗಳನ್ನು ನಿವಾರಿಸಲು ಒಣದ್ರಾಕ್ಷಿ ನೆನೆಸಿದ ನೀರು ಉತ್ತಮವಾಗಿದ್ದು ಇದರಿಂದ ಮೂತ್ರಪಿಂಡಗಳ ಒಳಗೆ ಕಲ್ಲು ಉಂಟಾಗುವುದು,ಸೋಂಕು ಉಂಟಾಗುವುದು ಮೊದಲಾದ ತೊಂದರೆಗಳಿಂದ ರಕ್ಷಣೆ ಪಡೆಯಬಹುದು. ಕ್ರೀಡಾಪಟುಗಳು ತಮ್ಮ ಬಲ ವೃದ್ಧಿಸಲು ಒಣದಾಕ್ಷಿ ಅಥವಾ ನೆನೆಸಿಟ್ಟ ದಾಕ್ಷಿಯ ಸೇವನೆ ಮಾಡಬೇಕು.