ಒಪ್ಪಂದ ಹಾಡುಗಳ ಅನಾವರಣ

ಹಿರಿಯ ನಟ ಅರ್ಜುನ್ ಸರ್ಜಾ ರಾಧಿಕಾ ಕುಮಾರಸ್ವಾಮಿ ಅಭಿನಯದ “ಒಪ್ಪಂದ ” ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಇದೇ ತಿಂಗಳಲ್ಲಿ ಚಿತ್ರ ರಾಜ್ಯದ್ಯಂತ ತೆರೆಯ ಮೇಲೆ ಕಾಣಿಸಿಕೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಟ್ರೈಲರ್ ಕೂಡ ಅನಾವರಣ ಮಾಡಿದ್ದು ಎಲ್ಲರಿಂದ ಮೆಚ್ಚುಗೆ ಮಹಾಪೂರ ಹರಿದು ಬಂದಿದೆ.
ನಟ ಅರ್ಜುನ್ ಸರ್ಜಾ ವಿಡಿಯೋ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಮಾತಿಗಿಳಿದ ನಿರ್ಮಾಪಕ, ನಿರ್ದೇಶಕ ಸಮೀರ್,ಚಿತ್ರ ಉತ್ತಮವಾಗಿ ಮೂಡಿಬರಲು ಅರ್ಜುನ್ ಸರ್ಜಾ, ಜೆ ಡಿ ಚಕ್ರವರ್ತಿ ಹಾಗೂ ರಾಧಿಕಾ
ಕುಮಾರಸ್ವಾಮಿ ಸಹಕಾರ ಬಹಳ ಮುಖ್ಯ. ಅವರೆಲ್ಲರೂ ಚಿತ್ರದಲ್ಲಿ ಅಮೋಘವಾಗಿ ನಟಿಸಿದ್ದಾರೆ. ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಇದೇ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. ನಟಿ ಸೋನಿ ಚರಿಶ್ಟಾ.ಪಾತ್ರ ತುಂಬಾ ಚೆನ್ನಾಗಿದೆ. ಅರ್ಜುನ್ ಸರ್ಜಾ, ಜೆ ಡಿ ಚಕ್ರವರ್ತಿ ಹಾಗೂ ರಾಧಿಕಾ ಕುಮಾರಸ್ವಾಮಿ ಅವರಂತಹ ನಟರೊಂದಿಗೆ ನಟಿಸಲು ಅವಕಾಶ ನೀಡಿದ ನಿರ್ದೇಶಕರಿಗೆ ನನ್ನ ಧನ್ಯವಾದ ಎಂದರು.
ಸಂಗೀತ ನಿರ್ದೇಶಕ ಸುಭಾಷ್ ಆನಂದ್‌ಚಿತ್ರದಲ್ಲಿ ಆರು ಹಾಡುಗಳಿವೆ.ಎಲ್ಲವೂ ಉತ್ತಮವಾಗಿ ಮೂಡಿ ಬರಲು ಸಹಕಾರಿಯಾದ ಗೀತ ರಚನೆಕಾರರಿಗೆ, ಗಾಯಕ, ಗಾಯಕಿಯರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ತಿಳಿಸಿದರು, ಚಿತ್ರದ ಸಹ ನಿರ್ಮಾಪಕ ಶಶಿಧರ್ ಹಾಗೂ ಕಲಾವಿದ ದುಬೈ ರಫಿಕ್ ತಮ್ಮ ಅನುಭವ ಹಂಚಿಕೊಂಡರು.
ಅಮೀರ್ ಲಾಲ್ ಛಾಯಾಗ್ರಹಣ, ಸುಭಾಷ್ ಆನಂದ್ ಸಂಗೀತ ನಿರ್ದೇಶನ, ರಾಘು ಕುಲಕರ್ಣಿ ಕಲಾ ನಿರ್ದೇಶನ, ಅಮ್ಮ ರಾಜಶೇಖರ್ ನೃತ್ಯ ನಿರ್ದೇಶನ, ಖಾಲಿ ಕಿಕಾಸ್ ಸಾಹಸ ನಿರ್ದೇಶನ ಹಾಗೂ ಪ್ರಭು ಸಂಕಲನವಿದೆ. ಅರ್ಜುನ್ ಸರ್ಜಾ, ರಾಧಿಕಾ ಕುಮಾರಸ್ವಾಮಿ, ಜೆ. ಡಿ.ಚಕ್ರವರ್ತಿ, ಅಮೀರ್ ಖಾನ್ ಸಹೋದರ ಫೈಸಲ್ ಖಾನ್ , ಸೋನಿ ಚರಿಶ್ಟಾ, ವಿಶ್ವನಾಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ಮಾಪಕರಾದ ರೆಹಮಾನ್ ಕೆ.ಮಂಜು, ಸೆವೆನ್ ರಾಜ್, ಫ್ಯಾಷನ್ ಡಿಸೈನರ್ ರಾಜೇಶ್ ಶೆಟ್ಟಿ, ಭವ್ಯಗೌಡ, ಮೋಹಿನಿ ಚೌಧರಿ ಮುಂತಾದ ಗಣ್ಯರು ಶುಭ ಕೋರಿದರು.