ಒಮಿಕ್ರಾನ್ ಭೀತಿ ಬಿಗಿ ಕ್ರಮಕ್ಕೆ ನಿರ್ಧಾರ

ಬೆಂಗಳೂರು, ನ.೩೦- ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ರೂಪಾಂತರ ಸೋಂಕು ರಾಜ್ಯದಲ್ಲೂ ಹೆಚ್ಚು ಆತಂಕ ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಬಸ್ಸು ರೈಲು ವಿಮಾನ ನಿಲ್ದಾಣಗಳಲ್ಲಿ ಸಂಪಿಗಿ ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಪರೀಕ್ಷಾ ಪ್ರಮಾಣ ಹೆಚ್ಚು ಮಾಡುವುದು ಹಾಗೂ ಸೋಂಕಿನ ತೀವ್ರತೆ ಆದರಿಸಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕಕರ್ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಗರದಲ್ಲಿ ನಡೆದಿದ್ದು ಸಂಜೆಯತನಕ ಸುಧೀರ್ಘವಾಗಿ ಚರ್ಚೆ ನಡೆಸಿ ಸೋಂಕು ತಡೆಗೆ ಅನುಸರಿಸಬೇಕಾದ ಮಾರ್ಗ ಸೂಚಿಗಳನ್ನು ಸಂಜೆ ವೇಳೆಗೆ ಪ್ರಕಟಿಸುವನಿರೀಕ್ಷೆ ಇದೆ.

ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು ಒಮಿಕ್ರಾನ್ ತಳಿಯ ಕೊರೊನಾ ವೈರಾಣುವಿನ ತೀವ್ರತೆ ಮತ್ತು ಪರಿಣಾಮಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಓ) ವರದಿ ಪ್ರಕಟವಾದ ಬಳಿಕವೇ ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಒಮಿಕ್ರಾನ್ ತಳಿಯ ವೈರಾಣುವಿನ ಹರಡುವಿಕೆ ಮತ್ತು ಅದರಿಂದ ಆರೋಗ್ಯದ ಮೇಲೆ ಆಗುವ ಹಾನಿ ಕುರಿತು ಈವರೆಗೂ ಅಧ್ಯಯನ ವರದಿ ಪ್ರಕಟವಾಗಿಲ್ಲ. ಡಿಸೆಂಬರ್ ೧ರ ವೇಳೆಗೆ ಡಬ್ಲ್ಯುಎಚ್‌ಓ ಅಧ್ಯಯನ ವರದಿ ಪ್ರಕಟವಾಗುವ ನಿರೀಕ್ಷೆ ಇದೆ. ಆ ಬಳಿಕವೇ ಹೊಸ ಕ್ರಮಗಳ ಕುರಿತು ಯೋಚಿಸಲಾಗುವುದು ಎಂದು ಹೇಳಿದರು.

ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಚರ್ಚೆ ನಡೆಸಿದ ನಂತರ ಮುಂದೆ ಅನುಸರಿಸಬೇಕಾದ ಮಾರ್ಗ ಸೂಚಿಗಳು ಮತ್ತು ಕ್ರಮಗಳ ಕುರಿತು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
೨ ಡೋಸ್ ಲಸಿಕೆ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ.ಇದರ ಜೊತೆಗೆ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ

ಜಿಲ್ಲೆಗಳಲ್ಲಿ ಕಟ್ಟೆಚ್ಚರ ಸೂಚನೆ:

ಕೇರಳ ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು. ಬಸ್, ರೈಲು ನಿಲ್ದಾಣಗಳು ಹಾಗು ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ತಪಾಸಣೆ ಮತ್ತು ಕಡ್ಡಾಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಓಮಿಕ್ರಾನ್ ಸೋಂಕಿನ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ ಅವರು ಹೊಸ ವರ್ಷ ಮತ್ತು ಕ್ರಿಸ್ಮಸ್ ಗೆ ಆಚರಣೆಗೆ ನಿರ್ಬಂಧ ವಿಧಿಸುವ ಚಿಂತನೆ ಇಲ್ಲ ಒಂದು ವೇಳೆ ಅವರು ತಿಳಿಸಿದರು.

ಲಾಕ್ಡೌನ್ ಇಲ್ಲ.ಆ ರೀತಿಯ ಯಾವುದೇ ಪ್ರಸ್ತಾಪವೂ ಇಲ್ಲ ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಇಲ್ಲ ಸಭೆ ಸಮಾರಂಭಗಳು, ಕೈಗಾರಿಕೆಗಳು ಪ್ರವಾಸಿ ಸ್ಥಳಗಳಿಗೆ ಯಾವುದೇ ಅಡಚಣೆಯಿಲ್ಲ ಇಲ್ಲವೇ ನಿರ್ಬಂಧ ಇಲ್ಲ ಎಂದು ಅವರು ತಿಳಿಸಿದರು.ಹೊಸ ವೈರಸ್ ಬಂದರೆ ತೊಂದರೆ ಇಲ್ಲ ಅದರ ತೀವ್ರತೆ ನಮಗೆ ಬಹಳ ಮುಖ್ಯ
ಪರಿಣಾಮ ಬೀರಿದರೆ ಮಾತ್ರ ಕಷ್ಟ
ಹೊಸ ತಳಿ ಬಗ್ಗೆ ಪರಿಸ್ಥಿತಿ ಅವಲೋಕನ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಯಾವುದೇ ಮಾರ್ಗಸೂಚಿ ನೀಡಿಲ್ಲ ಡಿಸೆಂಬರ್ ೧ ಅಥವಾ ೨ ರಂದು ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ ಅದರ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವ ಯಾವುದೇ ಉದ್ದೇಶವಿಲ್ಲ. ಆಫ್ ಲೈನ್ ಮತ್ತು ಆನ್ಲೈನ್ ತರಗತಿಗಳು ಮುಂದುವರಿಯಲಿವೆ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಬೇಡ ಎಂದು ಅವರು ತಿಳಿಸಿದ್ದಾರೆ.

ಹೊಸ ತಳಿಯ ತೀವ್ರತೆ ಆಧರಿಸಿ ಮುಂದಿನ ಕ್ರಮ

ರಾಜ್ಯಸಲ್ಲಿ ಲಾಕ್ ಡೌನ್ ಜಾರಿ ಮಾಡುವ ಪ್ರಸ್ತಾಪ ಇಲ್ಲ

ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸುದೀರ್ಘ ಚರ್ಚೆ

ಸೋಂಕು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚೆ

ತೆರೆದ ಪ್ರದೇಶದಲ್ಲಿ ೫೦೦ ಹಾಗೂ ಒಳಾಂಗಣ ಪ್ರದೇಶದಲ್ಲಿ ೨೦೦ ಮಂದಿ ಮಾತ್ರ ಅವಕಾಶ

ಶಾಲಾ-ಕಾಲೇಜು ಬಂದ್ ಇಲ್ಲ.

ಸೋಂಕಿನ ಬಗ್ಗೆ ಜನರಲ್ಲಿ ಹೆಚ್ಚು ಜನಜಾಗೃತಿ

ಗಡಿಭಾಗದಲ್ಲಿ ಅತ್ಯಂತ ಬಿಗಿ ಕ್ರಮ