ಒಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಚಿಕಿತ್ಸೆ

ಬೆಂಗಳೂರು,ಡಿ.೩ ರಾಜ್ಯದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಮತ್ತು ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.
ಒಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡುವುದು ಸೇರಿದಂತೆ ಅನೇಕ ಮಾರ್ಗಸೂಚಿಗಳನ್ನು ಜಾರಿಮಾಡಲು ಮುಂದಾಗಿರುವುದಾಗಿ ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರು, ಡೀನ್‌ಗಳು, ಎಲ್ಲಾ ಇಲಾಖೆ ಎಚ್.ಒ.ಡಿಗಳು ಮತ್ತು ವೈದ್ಯಕೀಯ ಅಧೀಕ್ಷಕರೊಂದಿಗೆ ಸಭೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದೇಶದಿಂದ ಬಂದವರ ಪೈಕಿ ಹತ್ತು ಜನರ ಸಂಪರ್ಕ ಸಿಗುತ್ತಿಲ್ಲ ಎಂದು ಅವರು ಹೇಳಿದರು.

ಒಮಿಕ್ರಾನ್ ಸೋಂಕು ರಾಜ್ಯದಲ್ಲಿ ಪತ್ತೆಯಾಗಿರುವ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ರವರು ತಜ್ಞರ ಸಭೆ ನಡೆಸಿ ಚರ್ಚಿಸಿದರು.


ವಿದೇಶದಿಂದ ರಾಜ್ಯಕ್ಕೆ ಬಂದವರು ಯಾರು ಕೂಡ ಜವಾಬ್ದಾರಿ ಮರೆಯಬಾರದು ಹಾಗೊಂದು ವೇಳೆ ಜವಾಬ್ದಾರಿ ಮರೆತರೆ ಅಗತ್ಯ ಕಾನೂನು ತರುವ ಸಂಬಂಧವು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ವಿದೇಶದಿಂದ ರಾಜ್ಯಕ್ಕೆ ಬಂದವರು ಯಾರೂ ಕೂಡ ತಮ್ಮ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಬಾರದು. ಒಂದು ವೇಳೆ ಹಾಗೆ ಮಾಡಿದರೆ ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಹೇಳಿದ ಅವರು ವಿದೇಶದಿಂದ ಬಂದವರ ಪೈಕಿ ಹತ್ತು ಜನರು ಪತ್ತೆಯಾಗಿದ್ದರೆ ಪೊಲೀಸರು ಅವರನ್ನು ಪತ್ತೆ ಹಚ್ಚಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜವಾಬ್ದಾರಿ ಮರೆತರೆ ಅದು ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಅವರು ಹೇಳಿದ ಅವರು ಕಾನೂನಿನಲ್ಲಿ ಮಾರ್ಪಾಟು ಮಾಡುವುದಿದ್ದರೆ ಮಾರ್ಗಸೂಚಿಯಲ್ಲಿ ಅದನ್ನು ಜಾರಿ ಮಾಡಲಾಗುವುದು ಮಾಡಲಾಗುವುದು ಎಂದರು
ಡೆಲ್ಟಾ , ಒಮಿಕ್ರಾನ್ ಸೋಂಕಿತರಿಗೆ ಒಟ್ಟಾಗಿ ಚಿಕಿತ್ಸೆ ನೀಡಬೇಕಾ ಅಥವಾ ಪ್ರತ್ಯೇಕವಾಗಿ ಚಿಕಿತ್ಸೆ ನೀಡಬೇಕೆ ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
ರಾಜ್ಯದ ೨೧ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಲಾಗಿದೆ.ಒಮಿಕ್ರಾನ್ ರಾಜ್ಯದಲ್ಲೂ ಪತ್ತೆಯಾಗಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ಒಂದೆರಡು ತಿಂಗಳು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವ ಕುರಿತಂತೆ ಚರ್ಚೆ ಮಾಡಲಾಗಿದೆ. ಈ ಸಂಬಂಧ ವಾರದೊಳಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವುದಾಗಿ ಅವರು ಹೇಳಿದ್ದಾರೆ.
ಆಸ್ಪತ್ರೆಯ ವೈದ್ಯರು ಸಿರಿಯ ವೈದ್ಯರು ಸೇರಿದಂತೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ವರ್ತಿಸಬೇಕು ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಕುರಿತಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರತ್ಯೇಕ ವಾರ್ಡ್:
ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಸೋಂಕು ಒಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ವಾರ್ಡ್ ಗಳನ್ನ ಮಾಡಿ ಚಿಕಿತ್ಸೆ ನೀಡಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ಅಗತ್ಯವಿದೆ ಅದರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಅಂತಿಮ ವರ್ಷದ ಎಂಎಸ್ಸಿ ಸೇರಿದಂತೆ ಪ್ಯಾರಾಮೆಡಿಕಲ್‌ನಲ್ಲಿ ಓದುತ್ತಿರುವ ಸಿಬ್ಬಂದಿ ಮತ್ತು ದಾದಿಯರನ್ನು ಇದಕ್ಕೆ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.