ಕಲಬುರಗಿ:ಜೂ.11: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ವರದಿಯಂತೆ ನ್ಯಾಯಯುತ ಒಳಮೀಸಲಾತಿ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಘಟನೆಯ ಜಿಲ್ಲಾದ್ಯಕ್ಷ ಸಿದ್ಧಲಿಂಗ ಸಿ ಕಟ್ಟಿಮನಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಈ ಹಿಂದೆ ಸಿದ್ದರಾಮಯ್ಯ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಸಾಮಾಜಿಕ ನ್ಯಾಯ ತಳಹದಿ ಮೇಲೆ ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು. ಈಗ ಬಹುಮತದಿಂದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ.ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದರು.ಪರಿಶಿಷ್ಟ 101 ಜಾತಿಗಳು ಅಸ್ಪೃಶ್ಯತೆಯಿಂದ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಹಿಂದುಳಿದಿವೆ.ಈ ಕುರಿತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಸೂಕ್ತ ಒಳಮೀಸಲಾತಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು