ಒಳ ಮೀಸಲಾತಿ ಕೇಂದ್ರಕ್ಕೆ ಶಿಫಾರಸ್ಸು: ಏ.೧೫ ರಂದು ಸಿಎಂ ಬೊಮ್ಮಾಯಿ ಆಗಮನ

ರಾಯಚೂರು, ಏ.೦೯- ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದರ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ ರಾಜ್ಯ ಬಿಜೆಪಿ ಸರ್ಕಾರ ನಿರ್ಧಾರ ಸ್ವಾಗತಿಸಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಏ.೧೫ ರಂದು ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಮತ್ತು ಸಮಾಜದ ಮುಖಂಡ ರವಿ ಜಾಲ್ದಾರ್ ಅವರು ಹೇಳಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿದ ರಾಜ್ಯ ಬಿಜೆಪಿ ಸರ್ಕಾರ ನಡೆ ಐತಿಹಾಸಿಕ ತೀರ್ಮಾನವಾಗಿದೆ ಎಂದರು.
ಒಳಮೀಸಲಾತಿ ಹೆಚ್ಚಳಕ್ಕೆ ಕಳೆದ ೨೫ ವರ್ಷಗಳಿಂದ ನಡೆದ ನಿರಂತರ ಹೋರಾಟಕ್ಕೆ ಇದು ಸಂದ ಜಯ ಹಿಂದಿನ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳದೇ ಮೂಲೆ ಗುಂಪು ಸೇರಿಸಿದೆ ಎಂದರು.ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಎಡಗೈ ಸಮುದಾಯಕ್ಕೆ ಶೇ.೪, ಬಲಗೈ ಸಮುದಾಯದಕ್ಕೆ ೫,೫, ಸ್ಪೃಶ್ಯ ಸಮುದಾಯಕ್ಕೆ ೪,೫ ಇತರೇ ಜಾತಿಗಳಿಗೆ ಶೇ.೧ರಷ್ಟು ಮೀಸಲಾತಿ ವರ್ಗೀಕರಣ ಅನುಷ್ಠಾನಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೂ ಸ್ವಾಗತ ಎಂದರು. ಆಯೋಗ ವರದಿಯನ್ನು ಅನುಷ್ಠಾನಕ್ಕೆ ರಾಜ್ಯ ಸಂಪುಟ ಸಮತಿ ತೀರ್ಮಾನಿಸಿ ಕೇಂದ್ರಕ್ಕೆ ಶಿಪ್ಪಾರಸ್ಸು ಮಾಡಿರುವುದು ಸ್ವಾಗತಿಸಿ ಎಲ್ಲ ಸಮುದಾಯದ ಮುಖಂಡರ ಸಭೆಯಲ್ಲಿ ಚರ್ಚೆಸಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಅಭಿನಂದನಾ ಸಮಾರಂಭಕ್ಕೆ ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಮತ್ತು ಸಾಮಾಜಿಕ ನ್ಯಾಯ ಸಚಿವ ಎ, ನಾರಾಯಣಸ್ವಾಮಿ, ರಾಜ್ಯಾಧ್ಯಕ್ಷ ಚಲುವಾದಿ ನಾರಾಯಣಸ್ವಾಮಿ ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಿ.ಯಲ್ಲಪ್ಪ, ನರಸಪ್ಪ ದಂಡೋರ, ಅನಿಲ್, ಮೋಚಿ ಸಮಾಜ ನರಸಪ್ಪ, ಭೋವಿ ಸಮಾಜ ಈರಣ್ಣ, ಆರ್ ಅಂಜಿನಯ್ಯ, ಜೆ. ಎಂ ಮೌನೇಶ ಕೌರವ ಸಮಾಜ ಬ್ರೂಸ್ ಲೀ ಸೇರಿದಂತೆ ಇತರೇ ಸಮಾಜದ ಮುಖಂಡರು ಇದ್ದರು.