ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ

ತಿಪಟೂರು, ನ. ೧೭-. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರಹೊಮ್ಮಿಸುವ ಸಲುವಾಗಿ ರಾಜ್ಯ ಸರ್ಕಾರವು ಮಕ್ಕಳಿಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಅದೇ ರೀತಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಮತ್ತಿಹಳ್ಳಿ ಗ್ರಾ.ಪಂ. ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಗೋಪಿನಾಥ್ ತಿಳಿಸಿದರು.
ಸರ್ಕಾರದ ಸುತ್ತೋಲೆಯಂತೆ ಮಕ್ಕಳ ಹಕ್ಕು, ರಕ್ಷಣೆಗೆ, ಸಂಬಂಧಿಸಿದಂತೆ ಈಗಾಗಲೇ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನದ ಪೂರ್ವಭಾವಿ ಸಭೆಯನ್ನು ಅಯೋಜನೆ ಮಾಡಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಿಕ್ಷಕರಿಗೂ, ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತರಿಗೆ , ಮಾಹಿತಿಯನ್ನು ತಿಳಿಸಿದ್ದು, ಸುತ್ತೋಲೆ ಮಾರ್ಗದರ್ಶನದಂತೆ ಮಕ್ಕಳ ಧ್ವನಿ ಪೆಟ್ಟಿಗೆಯನ್ನು ಸಿದ್ದಪಡಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಂಥಾಲಯದ ಮೇಲ್ವಿಚಾರಕ ಲೋಕೇಶ್, ಎಸ್‌ಡಿಎಂಸಿ ಸದಸ್ಯ ಪಂಚಾಕ್ಷರಯ್ಯ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಮಕ್ಕಳು ಮತ್ತಿತರರು ಉಪಸ್ಥಿತರಿದ್ದರು.