ಓಬವ್ವರ ಶೌರ್ಯ ಮಾತೃ ಭೂಮಿಯ ಮೇಲಿನ ಭಕ್ತಿ ಅನನ್ಯ: ಹೇಮಂತ್ ಕುಮಾರ್ ಗೌಡ

ಮೈಸೂರು: ನ.11:- ಯುವ ಭಾರತ್ ಸಂಘಟನೆ ವತಿಯಿಂದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನ ವನದಲ್ಲಿ ವೀರವನಿತೆ ಒನಕೆ ಓಬವ್ವ ಸ್ಮರಣೋತ್ಸವ ಅಂಗವಾಗಿ ವಿವಿಧ ಜಾತಿಗಳ ಸಸಿಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ಓಬವ್ವನ ವರ ಶೌರ್ಯ ಮಾತೃ ಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು ,ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ, ಅವರು ನಮ್ಮ ನಾರಿಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ, ಇತಿಹಾಸದ ಪುಟದಲ್ಲಿ ಅಚ್ಚಳಿಯದೇ ಉಳಿದಿರುವ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರದುರ್ಗವೂ ಒಂದು. ಚಿತ್ರದುರ್ಗ ಎಂದಾಕ್ಷಣ ನೆನಪಾಗುವುದೇ ಹೈದರಾಲಿಯ ಸೈನ್ಯದೊಂದಿಗೆ ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವ. ಆಕೆಯ ಸಾಹಸದ ಕತೆ ಎಂದಿಗೂ ಅಜರಾಮರ. ಅಂತಹ ಧೀರ ಮಹಿಳೆ ಜನಿಸಿದ ನಾಡಿನಲ್ಲಿ ನಾವಿರುವುದು ಬಹಳ ಹೆಮ್ಮೆಯ ವಿಚಾರ.
ಒನಕೆ ಓಬವ್ವ ಜಯಂತಿಗೆ ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ. ಚಿತ್ರದುರ್ಗದ ಇತಿಹಾಸದಲ್ಲಿ ಈ ಮಹಾತಾಯಿಯ ಹೆಸರು ಅಜರಾಮರ. ಕನ್ನಡ ನಾಡಿನ ನೂರಾರು ವೀರಾಗ್ರಣಿಯರಲ್ಲಿ ನಮ್ಮ ಓಬವ್ವ ಕೂಡಾ ಸೇರಿದ್ದಾರೆ. ಆದರೆ ಯಾವುದೇ ಜಯಂತಿಗೆ ರಜೆ ನೀಡದೇ ಆಯಾ ಸಾಧಕರ ಮಹತ್ವದ ಬಗ್ಗೆ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರೂ ಅರ್ಥೈಸಿಕೊಂಡಾಗ ಆ ಜಯಂತಿ ಸಾರ್ಥಕ.ಎಂದು ಹೇಳಿದರು
ಇದೇ ಸಂದರ್ಭದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರಾದ ಚಂದ್ರಶೇಖರ್, ಮೂಢ ಸದಸ್ಯರಾದ ಲಕ್ಷ್ಮೀದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರೇಣುಕಾ ರಾಜ್ ,ಮೃಗಾಲಯ ಪ್ರಾಧಿಕಾರದ ನಿರ್ದೇಶಕರಾದ ಜ್ಯೋತಿ ರಚನಾ, ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು, ಎಸ್ ಎನ್ ರಾಜೇಶ್, ಮಹೇಂದ್ರ m ಶೈವ, ಯುವ ಭಾರತ್ ಸಂಘಟನೆಯ ಪದಾಧಿಕಾರಿಗಳಾದ ರಾಜು ,ಚಕ್ರಪಾಣಿ, ಸುಚೇಂದ್ರ, ವಿಜಯ್ ಕುಮಾರ್, ಹರ್ಷಿತಾ, ಸಂತೃಪ್ತಿ ಹಾಗೂ ಇನ್ನಿತರರು ಹಾಜರಿದ್ದರು.